ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣದ ಅಪರಾಧಿ ವಿಷ್ಣು (24) ಎಂಬಾತನಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿ ನಗರದ 1ನೇ ತ್ವರಿತ ವಿಶೇಷ ನ್ಯಾಯಾಲಯ (ಎಫ್‌ಟಿಎಸ್‌ಸಿ) ಆದೇಶ ಹೊರಡಿಸಿದೆ.
ಬಾಗಲಗುಂಟೆ ಠಾಣೆಯಲ್ಲಿ 2019ರಲ್ಲಿ ದಾಖಲಾಗಿದ್ದ ಪ್ರಕರಣದ ವಿಚಾರಣೆಯನ್ನು ನ್ಯಾಯಾಧೀಶೆ ರೂಪಾ ಕೆ.ಎನ್ ನಡೆಸಿದ್ದರು. ಪಬ್ಲಿಕ್ ಪ್ರಾಸಿಕ್ಯೂಟರ್ ಪಿ.ಕೃಷ್ಣವೇಣಿ ವಾದಿಸಿದ್ದರು.


