ತಮಿಳುನಾಡಿಗೆ ಮತ್ತೆ ನೀರು ಹರಿಸಲು ಸುಪ್ರೀಂಕೋರ್ಟ್ ಆದೇಶ ಹೊರಡಿಸಿದ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಮಿತ್ರ ಪಕ್ಷ ಡಿಎಂಕೆ ಜೊತೆ ಕಾಂಗ್ರೆಸ್ ಸರ್ಕಾರ ಮಾತನಾಡಬೇಕು.
ಡಿಎಂಕೆ ಜೊತೆ ಚರ್ಚಿಸಿ ಕಾವೇರಿ ನದಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಿ. ಕೇಂದ್ರ ಮಧ್ಯ ಪ್ರವೇಶ ಮಾಡುವಂತೆ ಒತ್ತಾಯ ಮಾಡುವುದು ಸರಿಯಲ್ಲ. ತಮಿಳುನಾಡಿಗೆ ನೀರು ಬಿಟ್ಟು ಸರ್ಕಾರ ತಪ್ಪು ಮಾಡಿದೆ ಎಂದರು.


