ಮಂಡ್ಯ: ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ಹಿನ್ನಲೆ ಮಂಡ್ಯ ಜಿಲ್ಲೆಯಲ್ಲಿ ಕಾವೇರಿ ನೀರಿಗಾಗಿ ಹೋರಾಟ ತೀವ್ರಗೊಂಡಿದೆ. ಜಿಲ್ಲೆಯಲ್ಲಿಂದು ರೈತರು, ಕನ್ನಡ ಸಂಘಟನೆಗಳಿಂದ ಸರಣಿ ಪ್ರತಿಭಟನೆ ನಡೆಯಲಿದೆ.
ಇಡೀ ಬೆಂಗಳೂರಿಗೆ ನೀರು ಸರಬರಾಜು ಮಾಡುವ ಟಿ.ಕೆ.ಹಳ್ಳಿ ಪಂಪ್ಹೌಸ್ಗೆ ಕನ್ನಡಪರ ಸಂಘಟನೆಗಳ ಮುತ್ತಿಗೆ ಹಾಕಲಿದ್ದು, ಬೆಂಗಳೂರಿಗೆ ನೀರು ನಿಲ್ಲಿಸಿ ರೈತರ ಬೆಳೆಗೆ ನೀರು ಹರಿಸುವಂತೆ ಆಗ್ರಹಿಸಲಿದ್ದಾರೆ.


