ಬಸವನಗುಡಿ ಠಾಣೆ ವ್ಯಾಪ್ತಿಯ ಖಾಜಿ ಸ್ಟ್ರೀಟ್ ನಲ್ಲಿ ಅರ್ಬಾಜ್ (26) ಅವರನ್ನು ಕೊಲೆ ಮಾಡಲಾಗಿದ್ದು, ಮೂವರು ಆರೋಪಿಗಳು ಕೃತ್ಯ ಎಸಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ.
‘ಸ್ಥಳೀಯ ನಿವಾಸಿ ಅರ್ಬಾಜ್ ಅವರು ಶುಕ್ರವಾರ ಮಧ್ಯಾಹ್ನ ಮನೆಯಲ್ಲಿದ್ದರು. ಬೈಕ್ ನಲ್ಲಿ ಬಂದಿದ್ದ ಮೂವರು, ಮನೆ ಎದುರು ಅರ್ಬಾಜ್ ಜೊತೆ ಜಗಳ ತೆಗೆದು ಹಲ್ಲೆ ಮಾಡಿದ್ದರು. ತೀವ್ರ ಗಾಯಗೊಂಡು ಅರ್ಬಾಜ್ ಮೃತಪಟ್ಟಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.


