ರಾಷ್ಟ್ರ ರಾಜಧಾನಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಆಟೋರಿಕ್ಷಾ ಚಾಲಕರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಜನತಾ ಮಜೂರ್ ಕಾಲೋನಿಯಲ್ಲಿ ವಾಸಿಸುತ್ತಿದ್ದ 15 ವರ್ಷದ ಬಾಲಕಿಗೆ ಇಬ್ಬರು ಸಹೋದರರು ಕಿರುಕುಳ ನೀಡಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಕಳೆದ ಗುರುವಾರ ಈ ಘಟನೆ ನಡೆದಿದೆ. ಜನತಾ ಮಜೂರ್ ಕಾಲೋನಿಯಲ್ಲಿ ವಾಸವಾಗಿರುವ 15 ವರ್ಷದ ಬಾಲಕಿ ಕಿರುಕುಳಕ್ಕೆ ಬಲಿಯಾಗಿದ್ದಾಳೆ. ಜಾಹಿದ್ (22) ಮತ್ತು ಆತನ ಸಹೋದರ ಜುಬೇರ್ (24) ಮಗುವಿಗೆ ಚಿತ್ರಹಿಂಸೆ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರು ಆರೋಪಿಗಳೂ ಆಟೋ ಚಾಲಕರಾಗಿದ್ದಾರೆ.
ಇಬ್ಬರ ವಿರುದ್ಧವೂ ಅತ್ಯಾಚಾರ ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮಗುವನ್ನು ಕೌನ್ಸೆಲಿಂಗ್ ಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಉಪ ಪೊಲೀಸ್ ಆಯುಕ್ತ ಜಾರ್ಜ್ ಟಿರ್ಕಿ ತಿಳಿಸಿದ್ದಾರೆ. ದೆಹಲಿಯಲ್ಲಿ ಅಪರಾಧಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.


