ಬೆಂಗಳೂರು: ಆಟೋ ಚಾಲಕರ ವಿರುದ್ಧ ಸಂಚಾರಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದು 3.36 ಲಕ್ಷ ರೂ ದಂಡ ವಿಧಿಸಿದ್ದಾರೆ. ಸೆ.14ರಿಂದ 23ರವರೆಗೆ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಒಟ್ಟು 670 ಪ್ರಕರಣ ದಾಖಲಿಸಿಕೊಂಡು, 3.36 ಲಕ್ಷ ರೂ ದಂಡ ವಸೂಲಿ ಮಾಡಿದ್ದಾರೆ.
ಹೆಚ್ಚಿನ ದರ ಪಡೆಯುತ್ತಿದ್ದ ಆಟೋ ಚಾಲಕರಿಗೆ ಪೊಲೀಸರು ದಂಡದ ಬರೆ ಎಳೆದಿದ್ದಾರೆ. ಈಶಾನ್ಯ ಉಪ ವಿಭಾಗದಲ್ಲಿಹೆಚ್ಚು ಹಣ ಪಡೆದ ಆರೋಪದಡಿ ಒಟ್ಟು 141 ಚಾಲಕರ ವಿರುದ್ಧ ಪ್ರಕರಣ ದಾಖಲಿಸಿ, 72,000 ರೂ ದಂಡ ಹಾಕಲಾಗಿದೆ.


