ಅಮೆರಿಕದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮವೊಂದಕ್ಕೆ ಇನ್ಫೋಸಿಸ್ ಪ್ರತಿಷ್ಠಾನದ ಸುಧಾ ಮೂರ್ತಿ ಅವರು ಆಗಮಿಸಲಿದ್ದಾರೆ ಎಂದು ಸುಳ್ಳು ಹೇಳಿಕೊಂಡು, ಅವರ ಫೋಟೊ ಬಳಸಿ ವಂಚಿಸಿದ ಇಬ್ಬರು ಮಹಿಳೆಯರ ವಿರುದ್ಧ ಪ್ರಕರಣ ದಾಖಲಾಗಿದೆ.
ಸುಧಾ ಮೂರ್ತಿಯವರ ಎಕ್ಸಿಕ್ಯುಟಿವ್ ಅಸಿಸ್ಟೆಂಟ್ ಮಮತಾ ಸಂಜಯ್ ಎಂಬವರು ನೀಡಿದ ದೂರಿನನ್ವಯ ಲಾವಣ್ಯ ಹಾಗೂ ಶೃತಿ ಎಂಬಿಬ್ಬರ ವಿರುದ್ಧ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


