ಬೆಂಗಳೂರು: ಆಂಟಿ’ ಎಂದು ಕರೆದಿದ್ದರಿಂದ ಕೋಪಗೊಂಡ ಮಹಿಳೆಯೊಬ್ಬರು ಎಟಿಎಂ ಘಟಕದ ಭದ್ರತಾ ಸಿಬ್ಬಂದಿ ಕಪಾಳಕ್ಕೆ ಹೊಡೆದು ಜೀವ ಬೆದರಿಕೆಯೊಡ್ಡಿದ್ದು, ಈ ಸಂಬಂಧ ಮಲ್ಲೇಶ್ವರ ಠಾಣೆಗೆ ದೂರು ಸಲ್ಲಿಕೆಯಾಗಿದೆ.
ಎಟಿಎಂ ಘಟಕದ ಭದ್ರತಾ ಸಿಬ್ಬಂದಿಯಾಗಿರುವ 60 ವರ್ಷದ ವೃದ್ಧ, ಹಲ್ಲೆ ಹಾಗೂ ಜೀವ ಬೆದರಿಕೆ ಬಗ್ಗೆ ಇತ್ತೀಚೆಗೆ ದೂರು ನೀಡಿದ್ದಾರೆ.
ಅಪರಿಚಿತ ಮಹಿಳೆ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.


