ತುಮಕೂರು: ಬಿಜೆಪಿ -ಜೆಡಿಎಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಪಕ್ಷವನ್ನು ಉಳಿಸಲು ವರಿಷ್ಠರು ಈ ತೀರ್ಮಾನ ತಗೆದುಕೊಂಡಿದ್ದಾರೆ ಎಂಬುದು ನನ್ನ ಭಾವನೆ ಎಂದು ಚಿಕ್ಕನಾಯಕನಹಳ್ಳಿ ಜೆ.ಡಿ.ಎಸ್. ಶಾಸಕ ಸುರೇಶ್ ಬಾಬು ಪ್ರತಿಕ್ರಿಯಿಸಿದ್ದಾರೆ.
ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಇಂಡಿಯಾ ಕೂಟಕ್ಕೆ ಜೆ.ಡಿ.ಎಸ್ ಪಕ್ಷವನ್ನು ಆಹ್ವಾನ ಮಾಡಿಲ್ಲ ಅಂತಾ ತೀರ್ಮಾನ ತಗೊಂಡಿದ್ದಾರೆ ಎಂದರು.
ಪಕ್ಷದ ತೀರ್ಮಾನಕ್ಕೆ ನಾವು ಬದ್ದ. ಯಾವ ಯಾವ ಚುನಾವಣೆ ಹೊಂದಾಣಿಕೆ ಮಾಡ್ಕೊಳ್ತಾರೆ ಎಂಬುದನ್ನು ತಿರ್ಮಾನ ಮಾಡಿಲ್ಲ. ಸದ್ಯ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಆಗುತ್ತೆ ಎಂದರು.
ಮಾಧುಸ್ವಾಮಿ ಜೊತೆ ಕೈ ಜೊಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಪಕ್ಷ ಏನು ತೀರ್ಮಾನ ತಗೊಳುತ್ತೆ ಅದಕ್ಕೆ ನಾನು ಬದ್ದನಾಗಿರುತ್ತೇನೆ ಎಂದು ತಿಳಿಸಿದರು
ಜೆ.ಡಿ.ಎಸ್.ಪಕ್ಷದ ಮುಸ್ಲಿಂ ಮುಖಂಡರ ಅಸಮಾಧಾನ ವಿಚಾರಕ್ಕೆ ಸಂಬಂಧಿಸಿದಂತೆ ಇದೇ ವೇಳೆ ಪ್ರತಿಕ್ರಿಯಿಸಿದ ಅವರು, ಎಲ್ಲಾ ಪಕ್ಷದಲ್ಲೂ ಎಲ್ಲಾ ಸಮುದಾಯದವರೂ ಇದ್ದಾರೆ. ಎಲ್ಲಾ ಪಕ್ಷದಲ್ಲೂ ಮುಸ್ಲಿಂ ಇದ್ದಾರೆ. ಮುಸ್ಲಿಂ ಬರಿ ಕಾಂಗ್ರೆಸ್ ನಲ್ಲಿ ಮಾತ್ರ ಇಲ್ಲ ಎಂದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚು ಕಾಂಗ್ರೆಸ್ ಬೆಂಬಲಕ್ಕೆ ನಿಂತಿದ್ದರು . ಕಾರ್ಯಕ್ರಮಗಳ ಆಧಾರದ ಮೇಲೆ ಆ ಸಮುದಾಯದವರು ಮುಂದಿನ ನಿರ್ಧಾರ ತಗೋಳ್ತಾರೆ ಅನ್ನೊದು ನನ್ನ ಭಾವನೆ ಎಂದು ತಿಳಿಸಿದರು.
ಕಳೆದ ಎರಡುವರೆ ತಿಂಗಳು ನಿಂದಲೂ ನಾನು ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಜನ ಸಂಪರ್ಕ ಸಭೆಯನ್ನು ನಡೆಸುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಯಾವ ರೀತಿ ಇನ್ನಷ್ಟು ಬದಲಾವಣೆಗಳನ್ನು ತರಬಹುದು ಎಂಬ ಕುರಿತು ಮಾಹಿತಿ ಪಡೆಯಲು ಜನತಾದರ್ಶನ ನೋಡಲು ಬಂದಿದ್ದೇನೆ.


