ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೊಳಪಡದ ರಾಜ್ಯದ ದೇವಾಲಯಗಳನ್ನು ನೋಂದಣಿ ಮಾಡಲು ಹಾಗೂ ದೇವಾಲಯ ಆಸ್ತಿ, ಚಿನ್ನಾಭರಣ ಸೇರಿದಂತೆ ಒಟ್ಟು ಸಂಪನ್ಮೂಲ ದಾಖಲಿಸಬೇಕು ಎಂದು ನೈಜ ಹೋರಾಟಗಾರರ ವೇದಿಕೆಯ ನಿಯೋಗ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ನೀಡಿದೆ.
ಹಿಂದಿನ ಸರಕಾರದ ಮುಜರಾಯಿ ಇಲಾಖೆ ಸಚಿವರು ಅಸಂವಿಧಾನಿಕವಾಗಿ ಟಿಪ್ಪಣಿ ಹೊರಡಿಸಿದ್ದರು. ಇಂತಹ ಟಿಪ್ಪಣಿಗೆ ಕಾನೂನಿನಲ್ಲಿ ಯಾವುದೇ ಮಾನ್ಯತೆಯಿಲ್ಲ. ಇದನ್ನು ಈಗಿನ ಸರಕಾರ ಪರಿಗಣಿಸಿ ಇಲಾಖೆಗೆ ದೇವಾಲಯಗಳ ನೋಂದಣಿ ಮಾಡಬೇಕು ಎಂದರು.


