ಬೆಂಗಳೂರು: ನಾನು ಯಾವುದೇ ಬಂದ್ ಗೆ ಬೆಂಬಲ ಕೊಡಲ್ಲ. ಕನ್ನಡ ಭಾಷೆ, ನೆಲ, ಜಲದ ವಿಚಾರವಾಗಿ ನನ್ನ ಹೋರಾಟ ಮುಂದುವರಿಯುತ್ತೆ. ಬಂದ್ ನಿಂದ ಜನ ಸಾಮಾನ್ಯರಿಗೆ ತೊಂದರೆ ಆಗುತ್ತೆ.
ದಿನಗೂಲಿ ನೌಕಕರಿಗೆ ಈ ಬಂದ್ ನಿಂದ ತೊಂದರೆ ಆಗುತ್ತೆ. ಬಂದ್ ನಿಂದ ಕಾವೇರಿಯನ್ನ ಉಳಿಸಿಕೊಳ್ಳಲು ಆಗಲ್ಲ. ಬಂದ್ ಅಂದರೇ ಟೌನ್ ಹಾಲ್ ನಿಂದ ಮೆರವಣಿಗೆ ಬರುವುದು ಅಷ್ಟೇನಾ? ಮಾತಿಗೆ ಮುಂಚೆ ಬಂದ್ ಒಂದೇ ಬ್ರಹ್ಮಾಸ್ತ್ರ ಆಗಬಾರದು. ರಾಜಕಾರಿಣಿಗಳನ್ನು ನಂಬಿಕೊಂಡು ಹೋರಾಟಕ್ಕೆ ಹೋಗಬಾರದು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣ ಗೌಡ ಹೇಳಿದರು.


