nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ

    February 28, 2026

    ಕರ್ನಾಟಕ ಮಾದರ ಮಹಾಸಭಾ ತಾಲ್ಲೂಕು ನೂತನ ಅಧ್ಯಕ್ಷರಾಗಿ ವಿಭೂತಿ ಸಿದ್ದಪ್ಪ ನೇಮಕ

    February 28, 2026

    ಧಾರವಾಡ:  ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ

    February 28, 2026
    Facebook Twitter Instagram
    ಟ್ರೆಂಡಿಂಗ್
    • ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ
    • ಕರ್ನಾಟಕ ಮಾದರ ಮಹಾಸಭಾ ತಾಲ್ಲೂಕು ನೂತನ ಅಧ್ಯಕ್ಷರಾಗಿ ವಿಭೂತಿ ಸಿದ್ದಪ್ಪ ನೇಮಕ
    • ಧಾರವಾಡ:  ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ
    • ಉದ್ಯೋಗ ಪಡೆಯಲು ಯುವಕರ ಪ್ರಯತ್ನ ನಿರಂತರವಾಗಿರಲಿ: ಶಾಸಕ ಎಸ್.ಎನ್.ಚನ್ನಬಸಪ್ಪ
    • ಬಳ್ಳಾರಿ: ಟ್ರಾಫಿಕ್ ಸಮಸ್ಯೆ ಹಂತ–ಹಂತವಾಗಿ ಪರಿಹಾರ ಕ್ರಮ: ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್
    • ಬಳ್ಳಾರಿ:  ಪಠ್ಯಪುಸ್ತಕಗಳು ಶೈಕ್ಷಣಿಕ ವ್ಯವಸ್ಥೆಯಲ್ಲಿ ಮುಖ್ಯ ಪಾತ್ರ ವಹಿಸುತ್ತವೆ: ಪ್ರೊ.ಎಂ.ಮುನಿರಾಜು
    • “ಕೆಪಿಎಸ್ ಮ್ಯಾಗ್ನೆಟ್ ವಿರುದ್ಧ, “ನಮ್ಮೂರ ಸರ್ಕಾರಿ ಶಾಲೆ ಉಳಿಸಿ” : ಪೋಸ್ಟರ್ ಬಿಡುಗಡೆ!
    • ಎಸ್ ಸಿ ಕಾಲೋನಿಗಳಲ್ಲಿ ವರ್ಷದಿಂದ ಸ್ವಚ್ಛತೆಗೆ ಮುಂದಾಗದ ಅಧಿಕಾರಿಗಳು:  ಹೊಳವನಹಳ್ಳಿಯಲ್ಲಿ ಸ್ವಚ್ಛತೆಯೇ ಮಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್ ಸರಕಾರ ಕನ್ನಡಿಗರ ಸರಕಾರವೋ? ಸ್ಟಾಲಿನ್ ಅಧೀನದಲ್ಲಿರುವ ಬಾಡಿಗೆ ಸರಕಾರವೋ?: ಹೆಚ್.ಡಿ.ಕುಮಾರಸ್ವಾಮಿ
    ರಾಜ್ಯ ಸುದ್ದಿ September 26, 2023

    ಕಾಂಗ್ರೆಸ್ ಸರಕಾರ ಕನ್ನಡಿಗರ ಸರಕಾರವೋ? ಸ್ಟಾಲಿನ್ ಅಧೀನದಲ್ಲಿರುವ ಬಾಡಿಗೆ ಸರಕಾರವೋ?: ಹೆಚ್.ಡಿ.ಕುಮಾರಸ್ವಾಮಿ

    By adminSeptember 26, 2023No Comments1 Min Read
    kumaraswami

    ಬೆಂಗಳೂರು: ಕಾವೇರಿ ನದಿ ನೀರಿನ ಹಂಚಿಕೆಯಲ್ಲಿ ಪೂರ್ಣ ವೈಫಲ್ಯವಾಗಿರುವ ರಾಜ್ಯ ಕಾಂಗ್ರೆಸ್ ಸರಕಾರವನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

    ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಕಾಂಗ್ರೆಸ್ ಸರಕಾರ ಕನ್ನಡಿಗರ ಸರಕಾರವೋ? ಸ್ಟಾಲಿನ್ ಅಧೀನದಲ್ಲಿರುವ ಬಾಡಿಗೆ ಸರಕಾರವೋ? ಎಂದು ಪ್ರಶ್ನಿಸಿದ್ದಾರೆ.


    Provided by
    Provided by

    ಅಲ್ಲದೆ; ಕಾಂಗ್ರೆಸ್ ಪಕ್ಷವು ತಮಿಳುನಾಡಿನ ಡಿಎಂಕೆ ಪಕ್ಷದ ಬಿ ಟೀಂ ಎಂದು ಟಾಂಗ್ ನೀಡಿದ್ದಾರೆ ಅವರು.

    ಕಾವೇರಿ ಹೋರಾಟವನ್ನು ಹತ್ತಿಕ್ಕುತ್ತಿರುವ ಸರಕಾರದ ಕ್ರಮವನ್ನು ಚೋದ್ಯ ಎಂದು ಟೀಕಿಸಿರುವ ಅವರು; ಒಂದು ಕಡೆ ಮೇಕೆದಾಟು ಬೇಕು ಎಂದು ಪಾದಯಾತ್ರೆ ಮಾಡಿದವರು, ಇಂದು ಕಾವೇರಿ ನೀರಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದ ರೈತರನ್ನು, ಹೋರಾಟಗಾರರನ್ನು ಬಂಧಿಸಿದ್ದಾರೆ. ರಾತ್ರೋರಾತ್ರಿ ಹೋರಾಟಗಾರರನ್ನು ಬಂಧಿಸಿರುವುದು ಸರಕಾರದ ಕಿಡಿಗೇಡಿತನದ ಪರಮಾವಧಿ. ಕರ್ನಾಟಕದಲ್ಲಿ ಕಾಂಗ್ರೆಸ್ಸಿಗರಿಗೆ ಒಂದು ನ್ಯಾಯ, ಕನ್ನಡಿಗರಿಗೆ ಇನ್ನೊಂದು ನ್ಯಾಯ ಎನ್ನುವುದು ಇದೆಯಾ? ಎಂದು ಕೇಳಿದ್ದಾರೆ.

    ಕೋವಿಡ್ ನಿಯಮ ಉಲ್ಲಂಘಿಸಿ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಮಾಡಬಹುದಾದರೆ, ನಾಡಿನ ಜೀವನಾಡಿ ಕಾವೇರಿಗಾಗಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಬಾರದೇ? ಶಾಂತವಾಗಿ ಹೋರಾಟ ನಡೆಸುತ್ತಿದ್ದ ರೈತರು, ಹೋರಾಟಗರನ್ನು ಬಂಧಿಸಿರುವುದು ಖಂಡನೀಯ. ಇದೇನು ಕನ್ನಡಿಗರ ಸರಕಾರವೋ? ಸ್ಟಾಲಿನ್ ಅಧೀನದಲ್ಲಿರುವ ಬಾಡಿಗೆ ಸರಕಾರವೋ? ಕನ್ನಡಿಗರು ಮತ ಹಾಕಿದ್ದು ಯಾರಿಗೆ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.

    ಹೋರಾಟಗಾರರು, ರೈತರನ್ನು ಕೂಡಲೇ ಬಂಧಮುಕ್ತಗೊಳಿಸಬೇಕು. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಬೇಕು. ಕಾಂಗ್ರೆಸ್ ಪಕ್ಷವು ಡಿಎಂಕೆ ಪಕ್ಷದ ಬಿ ಟೀಂ ಆಗಿ ಪರಿವರ್ತನೆ ಆದ ಪರಿಣಾಮವೇ ಈ ಕಾವೇರಿ ಬಿಕ್ಕಟ್ಟು ಎನ್ನುವುದು ಕನ್ನಡಿಗರಿಗೆ ಅರ್ಥವಾಗಿದೆ ಎಂದು ಅವರು ಕಿಡಿಕಾರಿದ್ದಾರೆ.

    admin
    • Website

    Related Posts

    ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್

    February 27, 2026

    ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

    February 27, 2026

    ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ

    February 25, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ

    February 28, 2026

    ಕೊರಟಗೆರೆ : ತಾಲ್ಲೂಕಿನ ಅಕ್ಕಿರಾಂಪುರದ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ…

    ಕರ್ನಾಟಕ ಮಾದರ ಮಹಾಸಭಾ ತಾಲ್ಲೂಕು ನೂತನ ಅಧ್ಯಕ್ಷರಾಗಿ ವಿಭೂತಿ ಸಿದ್ದಪ್ಪ ನೇಮಕ

    February 28, 2026

    ಧಾರವಾಡ:  ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ

    February 28, 2026

    ಉದ್ಯೋಗ ಪಡೆಯಲು ಯುವಕರ ಪ್ರಯತ್ನ ನಿರಂತರವಾಗಿರಲಿ: ಶಾಸಕ ಎಸ್.ಎನ್.ಚನ್ನಬಸಪ್ಪ

    February 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.