ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ) ಪ್ರಕರಣದ ಆರೋಪಿ ಚಿತ್ರದುರ್ಗ ಬೃಹನ್ಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ಜಾಮೀನು ಅರ್ಜಿಯನ್ನು ಹೈಕೋರ್ಟ್ ಮುಂದೂಡಿದೆ.
ಈ ಕುರಿತಂತೆ ಶರಣರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಶ್ರೀನಿವಾಸ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ಪ್ರಕರಣದಲ್ಲಿ ಇಬ್ಬರು ಬಾಲಕಿಯರು ಸಂತ್ರಸ್ತೆಯರಾಗಿದ್ದು, ಒಂದೇ ಅಪರಾಧ ದಾಖಲಾಗಿದ್ದರೂ ತನಿಖಾಧಿಕಾರಿಗಳು ಎರಡು ಪ್ರತ್ಯೇಕ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.


