ಕೆಎಸ್ ಆರ್ ಟಿಸಿ ನೌಕರರಿಗೆ ಈಗಾಗಲೇ 1 ಕೋಟಿ ಅಪಘಾತ ವಿಮೆ ಮಾಡಲಾಗಿದ್ದು, ಬಿಎಂಟಿಸಿ ನೌಕರರಿಗೂ ವಿಸ್ತರಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಸೋಮವಾರ ನಡೆದ ಬಿಎಂಟಿಸಿ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸತ್ಯವತಿ, ಬಿಎಂಟಿಸಿ ನಿವೃತ್ತ ವ್ಯವಸ್ಥಾಪಕ ನಿರ್ದೇಶಕ ಉಪೇಂದ್ರ ತ್ರಿಪಾಠಿ, ನಿವೃತ್ತ ನಿರ್ದೇಶಕ ಶ್ರೀನಿವಾಸ್ ಇದ್ದರು.


