ತಮಿಳುನಾಡಿಗೆ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ವಿಚಾರಕ್ಕೆ ಸಂಬಂಧಿಸಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
CWRC ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸುತ್ತೇವೆ. ಸದ್ಯ ನಮ್ಮ ಬಳಿ ನೀರು ಇಲ್ಲ, ಕಾನೂನು ತಜ್ಞರ ಸಲಹೆ ಪಡೆದಿದ್ದೇವೆ. ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ. ಕಾವೇರಿ ನೀರು ವಿಚಾರದಲ್ಲಿ ಬಿಜೆಪಿ, ಜೆಡಿಎಸ್ ರಾಜಕೀಯ ಮಾಡುತ್ತಿವೆ ಎಂದರು.


