ದೊಡ್ಡಬಳ್ಳಾಪುರದಲ್ಲಿ ಅಕ್ರಮವಾಗಿ ಗೋಮಾಂಸ ಸಾಗಾಟಗಾರರ ಮೇಲೆ ಹಲ್ಲೆಯ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ ಹಿನ್ನೆಲೆಯಲ್ಲಿ 6 ಫೇಸ್‌ಬುಕ್ ಹಾಗೂ ಟೆಲಿಗ್ರಾಪ್ ಗ್ರೂಪ್‌ಗಳ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಸೆ.24ರಂದು ದೊಡ್ಡಬಳ್ಳಾಪುರದ ಐಬಿ ವೃತ್ತದಲ್ಲಿ ಅಕ್ರಮವಾಗಿ 18 ಟನ್ ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನಗಳನ್ನು ಶ್ರೀರಾಮಸೇನೆ ಕಾರ್ಯಕರ್ತರು ತಡೆದಿದ್ದು, ಕಾರಿಗೆ ಬೆಂಕಿ ಹಚ್ಚಿ ಆಕ್ರೋಶವನ್ನು ಹೊರಹಾಕಿದ್ದರು.


