ತುಮಕೂರು: ಕಾವೇರಿ ನದಿ ನೀರು ತಮಿಳುನಾಡಿಗೆ ಹರಿಸುವುದನ್ನು ತಡೆಗಟ್ಟುವಂತೆ ಒತ್ತಾಯಿಸಿ ಇಂದು ಕರೆ ನೀಡಲಾಗಿರುವ ಕರ್ನಾಟಕ ಬಂಧಗೆ ತುಮಕೂರು ನಗರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ನಗರದ ಎಲ್ಲಾ ವಾಣಿಜ್ಯ ಮಳಿಗೆಗಳು ಬಂದ್ ಆಗಿದ್ದು ವ್ಯಾಪಾರವಹಿವಾಟು ಸಂಪೂರ್ಣ ಸ್ಥಗಿತಗೊಂಡಿದೆ. ನಗರದಲ್ಲಿ ಆಟೋ ಸಂಚಾರ ಯಥಾ ಸ್ಥಿತಿಯಲ್ಲಿದೆ, ಆದರೂ ಆಟಗಳ ಸಂಖ್ಯೆ ರಸ್ತೆಯಲ್ಲಿ ವಿರಳ ಸಂಖ್ಯೆಯಲ್ಲಿ ಸಾಗುತ್ತಿರುವುದು ಕಂಡುಬಂದಿದೆ. ಇನ್ನು ಬೆಂಗಳೂರಿಗೆ ತೆರಳುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಗಳು ತೆರಳುತ್ತಿದ್ದರು ಪ್ರಯಾಣಿಕರ ಸಂಖ್ಯೆ ಅತಿ ಕಡಿಮೆ ಸಂಖ್ಯೆಯಲ್ಲಿದೆ.
ಇನ್ನೊಂದೆಡೆ ತುಮಕೂರು ನಗರದ ಟೌನ್ ಹಾಲ್ ವೃತ್ತದಲ್ಲಿ ಜಮಾಯಿಸಿದ ವಿವಿಧ ಸಂಘಟನೆಗಳ ಕಾರ್ಯಕರ್ತರು ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ಘೋಷಣೆ ಕೂಗಿದರು. ವಿಶೇಷವಾಗಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅಣುಕು ಶವಯಾತ್ರೆಯನ್ನು ಮಾಡಿದರು.
ರೈತ ಸಂಘ, ಕನ್ನಡ ಸೇನೆ , ಜೈ ಕರ್ನಾಟಕ, ರಕ್ಷಣಾ ವೇದಿಕೆ ಸೇರಿದಂತೆ ವಿಧ ಕನ್ನಡಪರ ಸಂಘಟನೆಗಳು ಕಾರ್ಯಕರ್ತರು ತುಮಕೂರು ನಗರದಲ್ಲಿ ಪ್ರತಿಭಟನೆ ಮೆರವಣಿಗೆ ನಡೆಸಿದರು.
ಕರ್ನಾಟಕ ಬಂದ್ ಗೆ ತುಮಕೂರು ಜಿಲ್ಲೆಯಲ್ಲಿ ಖಾಸಗಿ ಶಾಲಾ ಕಾಲೇಜುಗಳು ಈಗಾಗಲೇ ರಜೆ ಘೋಷಣೆ ಮಾಡಿದ್ದು ಶಾಲಾ ಕಾಲೇಜುಗಳ ಕಾರ್ಯ ವ್ಯಾಪ್ತಿ ಸಂಪೂರ್ಣ ಸ್ತಬ್ಧಗೊಂಡಿದೆ. ಇನ್ನೊಂದೆಡೆ ಕೆಲ ಸರ್ಕಾರಿ ಶಾಲೆಗಳ ಕಾರ್ಯನಿರ್ವಹಿಸುತ್ತೇವೆ. ಚಲನಚಿತ್ರ ಮಂದಿರಗಳು ಕೂಡ ಮುಚ್ಚಲ್ಪಟ್ಟಿವೆ.


