ರಾಜ್ಯ ಬಂದ್ ಹಿನ್ನೆಲೆಯಲ್ಲಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್, ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿ ಕಪ್ಪು ಬುರ್ಖ ಧರಿಸಿ, ಖಾಲಿ ಕೊಡವನ್ನು ತಲೆ ಮೇಲೆ ಇಟ್ಟುಕೊಂಡು ವಿನೂತನವಾಗಿ ಪ್ರತಿಭಟನೆ ಮಾಡುವ ಮೂಲಕ ಖಂಡಿಸಿದರು.
ನಾವು ಕಾವೇರಿ ನೀರು ಬಿಡಬೇಡಿ ಎಂದು ಬಂದ್ ಮಾಡುತ್ತಿದ್ದೇವೆ. ಆದರೆ ರಾಜ್ಯಸರ್ಕಾರ ನಮ್ಮನ್ನು ಬಂದ್ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ನೀರು ಬಿಡಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.


