ತುರುವೇಕೆರೆ: ತಾಲೂಕಿನ ಸೊರವನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಟಿ.ಬಿ.ಕ್ರಾಸ್ ನೆಹರು ವಿದ್ಯಾ ಶಾಲೆ ಪದವಿ ಪೂರ್ವ ಕಾಲೇಜು ಆವರಣದ ಮುಂಭಾಗ, ತುಮಕೂರಿನಿಂದ ಮೈಸೂರು ರಸ್ತೆ ಮಾರ್ಗ ಕಲ್ಪಿಸುವ ಸ್ಥಳದಲ್ಲಿ ಎರಡು ದ್ವಿಚಕ್ರ ವಾಹನಗಳು ಮೂಖಾಮುಖಿ ಡಿಕ್ಕಿ ಹೊಡೆದ ಪರಿಣಾಮ, ಎರಡು ವಾಹನಗಳು ಜಖಂ ಆಗಿದ್ದು, ಓರ್ವ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿವೆ.
ಗಿರೀಶ್ ಎಂಬವರು ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನಾಗಿದ್ದು, ಅವರನ್ನು ಆದಿಚುಂಚನಗಿರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಇನ್ನೋರ್ವ ದ್ವಿಚಕ್ರ ವಾಹನ ಸವಾರನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅವರನ್ನು ಮಾಯಸಂದ್ರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ,
ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಯಸಂದ್ರ ಉಪ ಠಾಣೆ ಹೆಡ್ ಕಾನ್ಸ್ಟೇಬಲ್ ಧನಂಜಯ್, ಕಾನ್ಸ್ಟೇಬಲ್ ಆನಂದ್, ಆರಕ್ಷಕ ಸಿಬ್ಬಂದಿಗಳು ಸ್ಥಳಕ್ಕೆ ಬಂದು ಸ್ಥಳ ಪರಿಶೀಲನೆ ಮಾಡಿ ಪ್ರಕರಣದ ದಾಖಲು ಮಾಡಿಕೊಂಡಿದ್ದಾರೆ.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ