ಕಾವೇರಿ ನೀರಿಗಾಗಿ ಶುಕ್ರವಾರ ರಾಜ್ಯಾದಂತ ಬಂದ್ ಹಿನ್ನೆಲೆ ಬೀದರ್ ನಲ್ಲಿ ಕನ್ನಡಪರ ಹೋರಾಟಗಾರರು ಪ್ರತಿಭಟನಾ ಮೆರವಣಿಗೆ ನಡೆಸಿದರು.
ಕರವೇ ಪ್ರವೀಣ ಶೆಟ್ಟಿ ಬಣ, ಕನ್ನಡಿಗರ ರಕ್ಷಣಾ ವೇದಿಕೆ, ಕರವೇ ಯುವ ಘರ್ಜನೆಯಿಂದ ಬೀದರ್ ನಲ್ಲಿ ಪ್ರತಿಭಟನೆ ನಡೆಯಿತು.
ಇಲ್ಲಿನ ಬಸವೇಶ್ವರ ವೃತ್ತದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಸಾಗಿತು. ಈ ವೇಳೆ ಪ್ರತಿಭಟನಾಕಾರರು, ಸರ್ಕಾರದ ವಿರುದ್ದ ದಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.
ರೈತ ವಿರೋಧಿ ಸರ್ಕಾರ, ಒಳ ಒಪ್ಪಂದ ಮಾಡಿಕೊಳ್ಳುವ ಸರ್ಕಾರ ಎಂದು ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿಗಳ ಮುಖಾಂತರ ಸರಕಾರಕ್ಕೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು.
ವರದಿ: ಅರವಿಂದ ಮಲ್ಲಿಗೆ, ಬೀದರ್


