ತುರುವೇಕೆರೆ : ಹಾವು ಕಡಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ತುರುವೇಕೆರೆ ತಾಲೂಕಿನ ನಾಗಲಾಪುರ ಗ್ರಾಮದಲ್ಲಿ ನಡೆದಿದೆ.
ಸುಮಾರು 42 ವರ್ಷ ವಯಸ್ಸಿನ ಮಹೇಶ್ ಶೆಟ್ಟಿ ಸನ್ ಆಫ್ ತಿಮ್ಮಯ್ಯ ಎಂಬವರು ತಮ್ಮ ತೋಟದಲ್ಲಿ ತೆಂಗಿನ ಮರಗಳಿಗೆ ಗೊಬ್ಬರ ಹಾಕುವ ಸಮಯದಲ್ಲಿ ಆಕಸ್ಮಿಕವಾಗಿ ಹಾವು ಕಚ್ಚಿತ್ತು.
ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಮೃತರು ಎರಡು ಗಂಡು ಒಂದು ಹೆಣ್ಣು ಮಗುವಿದ್ದು ಹಾಗೂ ಪತ್ನಿ ಸುಜಾತ ಅವರನ್ನು ಅಗಲಿದ್ದಾರೆ.
ಮೃತದೇಹವನ್ನು ತುರುವೇಕೆರೆ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಶವ ಗಾರದಲ್ಲಿ ಇರಿಸಿ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಈ ಸಂಬಂಧ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಪೊಲೀಸರು ಹೆಚ್ಚಿನ ತನಿಖೆಯನ್ನು ಕೈಗೊಂಡಿದ್ದಾರೆ.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ