ಹೆಚ್.ಡಿ.ಕೋಟೆ: ಶುಕ್ರವಾರ ನಡೆದ ಕರ್ನಾಟಕ ಬಂದ್, ಕಾವೇರಿ ಹೋರಾಟದಲ್ಲಿ ರೈತ, ದಲಿತ, ಪ್ರಗತಿಪರ ಸಂಘಟನೆಗಳು ಭಾಗಿಯಾಗಿ, ತಮಿಳುನಾಡಿಗೆ ನೀರು ಹರಿಸುವುದನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಸಾರ್ವಜನಿಕರು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಸ್ವಯಂ ಪ್ರೇರಿತರಾಗಿ ಬಂದ್ ಆಚರಿಸಿದರು. ಹೆಚ್ ಡಿ ಕೋಟೆ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಮುಖ್ಯರಸ್ತೆ ಬಾಪೂಜಿ ಸರ್ಕಲ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ತಮಿಳುನಾಡಿಗೆ ಕೂಡಲೇ ನೀರು ಹರಿಸುತ್ತಿರುವುದನ್ನು ತಕ್ಷಣವೇ ನಿಲ್ಲಿಸಬೇಕು, ಪ್ರಧಾನ ಮಂತ್ರಿಗಳು ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಇದೇ ವೇಳೆ ಒತ್ತಾಯಿಸಲಾಯಿತು.
ವರದಿ: ಮಲಾರ ಮಹದೇವಸ್ವಾಮಿ


