ಬೆಂಗಳೂರು : ಖಾಲಿ ನಿವೇಶನ, ಫ್ಲ್ಯಾಟ್ ಹಾಗೂ ಮನೆಗಳಿಗೆ ಸಂಬಂಧಪಟ್ಟಂತೆ ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್‌ಗಳಿಂದ ಸಾಲ ಪಡೆದು ವಂಚಿಸುತ್ತಿದ್ದ ಆರೋಪಿ ಕೃಷ್ಣಕುಮಾರ್ (39) ಅವರನ್ನು ಶೇಷಾದ್ರಿಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಲಗ್ಗೆರೆ ನಿವಾಸಿ ಕೃಷ್ಣಕುಮಾರ್, ತನ್ನದೇ ತಂಡ ಕಟ್ಟಿಕೊಂಡು ವಂಚನೆ ಮಾಡುತ್ತಿದ್ದ. ಈತನ ಕೃತ್ಯದ ವಿರುದ್ಧ 9 ಠಾಣೆಗಳಲ್ಲಿ 15 ಪ್ರಕರಣಗಳು ದಾಖಲಾಗಿದ್ದವು. ತನಿಖೆ ಕೈಗೊಂಡು ಇತ್ತೀಚೆಗೆ ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.


