ಬೆಂಗಳೂರು : ಡ್ರಗ್ಸ್ ಸಾಗಣೆ ಹಾಗೂ ಮಾರಾಟದ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿರುವ ಪೊಲೀಸರು, ಸೆಪ್ಟೆಂಬರ್ ನಲ್ಲಿ 293 ಕೆ.ಜಿ ಡ್ರಗ್ಸ್ ಜಪ್ತಿ ಮಾಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪೊಲೀಸ್ ಕಮಿಷನರ್ ಬಿ. ದಯಾನಂದ್, ‘ಡ್ರಗ್ಸ್ ಮಾರಾಟ ಹಾಗೂ ಸೇವನೆ ತಡೆಯಲು ವಿಶೇಷ ಒತ್ತು ನೀಡಲಾಗಿದೆ. ಸೆಪ್ಟೆಂಬರ್‌ನಲ್ಲಿ 237 ಪ್ರಕರಣ ದಾಖಲಿಸಿಕೊಂಡು, 351 ಆರೋಪಿಗಳನ್ನು ಬಂಧಿಸಲಾಗಿದೆ’ ಎಂದರು.
13 ವಿದೇಶಿಯರು ಹಾಗೂ ಹೊರ ರಾಜ್ಯಗಳ 27 ಆರೋಪಿಗಳನ್ನು ಬಂಧಿಸಲಾಗಿದೆ. ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಸ್ಥಳೀಯರನ್ನೂ ಸೆರೆ ಹಿಡಿಯಲಾಗಿದೆ. ಇವರೆಲ್ಲರಿಂದ 7 8.63 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ’ ಎಂದರು.


