5 ಗ್ಯಾರಂಟಿಗಳ ಘೋಷಣೆ ಮಾಡಿದ್ದೆವು, ಅದರಂತೆ ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ. ಸರ್ಕಾರಕ್ಕೆ ಬಸವಣ್ಣನವರೇ ಪ್ರೇರಣೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ತರಳಬಾಳು ಮಠ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಗಳ ನೇತೃತ್ವದಲ್ಲಿ ಬಸವಣ್ಣನವರ ಹಾದಿಯಲ್ಲಿ ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ ಎಂದು ಅವರು ಹೇಳಿದರು.
ಅಕ್ಷರ ದಾಸೋಹ, ಬಸವತತ್ವ, ರೈತರ ಬಗ್ಗೆ ನೀರಾವರಿಯ ಬಗ್ಗೆ ಕಾಳಜಿ ಹೊಂದಿರುವ ತರಳಬಾಳು ಶ್ರೀಗಳು, ನ್ಯಾಯಾಲಯ ಬಿಟ್ಟರೇ ತರಳಬಾಳು ಮಠದ ಸದ್ಧರ್ಮ ನ್ಯಾಯ ಪೀಠವೇ ಅತ್ಯಂತ ಶಕ್ತಿಯುತವಾದ ನ್ಯಾಯಪೀಠ ಎಂದರು.


