ಬೀದರ್: ಜಿಲ್ಲಾ ಪೊಲೀಸ್ ಘಟಕದ ವತಿಯಿಂದ ಇಲಾಖೆಯಲ್ಲಿ ವಯೋ ನಿವೃತಿ ಹೊಂದಿದ್ದ ಅಧಿಕಾರಿ ಹಾಗೂ ಸಿಬ್ಬಂದಿಗೆ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗಿತ್ತು.
ಬೀದರ ಜಿಲ್ಲಾ ಪೊಲೀಸ್ ಘಟಕದಿಂದ ಇಲಾಖೆಯಲ್ಲಿ ಪೂರ್ಣಾವಧಿ ಸೇವೆ ಸಲ್ಲಿಸಿ, ವಯೋ ನಿವೃತ್ತಿ ಹೊಂದುತ್ತಿರುವ ಪಿ.ಎಸ್.ಐ. ಬೀದರ ನಗರ ಪೊಲೀಸ್ ಠಾಣೆಯ ಮೋಹನ ಮಹಾರಾಜ, ಎ.ಎಸ್.ಐ ಮಾರ್ಕೆಟ್ ಠಾಣೆಯ ವಿನೋದ, ಎ.ಎಸ್.ಐ ಗಾಂಧಿಗಂಜ ಠಾಣೆಯ ಹಸನಸಾಬ್ ಅವರನ್ನು ಬೀಳ್ಕೊಡಲಾಯಿತು.
ನಿವೃತ್ತ ಅಧಿಕಾರಿಗಳು ತಮ್ಮ ನಿವೃತ್ತಿ ಜೀವನವನ್ನು ಸುಖ, ಶಾಂತಿ, ನೆಮ್ಮದಿಯಿಂದ ಕಳೆಯುವಂತಾಗಲಿ ಹಾಗೂ ಅವರ ಅನುಭವದಿಂದ ಸಮಾಜಕ್ಕೆ ಏನಾದರೂ ಕೊಡುಗೆ ದೊರೆಯುವಂತಾಗಲಿ ಎಂದು ಹಾರೈಸಿದ ಅಧಿಕಾರಿಗಳು, ಸಿಬ್ಬಂದಿ ನೆನಪಿನ ಕಾಣಿಕೆ ನೀಡು ಶುಭ ಹಾರೈಸಿದರು.
ವರದಿ: ಅರವಿಂದ ಮಲ್ಲಿಗೆ, ಬೀದರ್


