ಬೆಂಗಳೂರು: ಒಂಟಿಯಾಗಿ ಓಡಾಡುವ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಕಾಮುಕನನ್ನು ಹೈಗೌಂಡ್ಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ವೈಯಾಲಿಕಾವಲ್ ನಿವಾಸಿ ಅಯ್ಯಪ್ಪ ಬಂಧಿತ ಆರೋಪಿ, ತಮಿಳುನಾಡು ಮೂಲದವನಾದ ಈತ ವರ್ಕ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದನು.
ವಸಂತನಗರದಲ್ಲಿ ಇತ್ತೀಚೆಗೆ ರಾತ್ರಿ ವೇಳೆ ವಾಯು ವಿಹಾರ ಮಾಡುತ್ತಿದ್ದ ಯುವತಿಯನ್ನು ಕಂಡು ಸ್ವಲ್ಪ ದೂರದಲ್ಲಿ ಬೈಕ್ ನಿಲ್ಲಿಸಿ ನಂತರ ಯುವತಿಯನ್ನು ಹಿಂಬಾಲಿಸಿಕೊಂಡು ಹೋಗಿ ಆಕೆಯನ್ನು ತಬ್ಬಿಕೊಂಡು ನಂತರ ಅಸಭ್ಯವಾಗಿ ವರ್ತಿಸಿದ್ದ ಎನ್ನಲಾಗಿದೆ.


