ಸೋಮಪುರ ಬಳಿಯ ನೈಸ್ ರಸ್ತೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ, ತಾಯಿ- ಮಗು ಸಜೀವ ದಹನಗೊಂಡಿದ್ದಾರೆ. ಕಾರಿನಲ್ಲಿ ಒಂದೇ ಕುಟುಂಬದ ನಾಲ್ವರು ಪ್ರಯಾಣ ಮಾಡುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ದಂಪತಿಯನ್ನು ಮಹೇಂದ್ರನ್ ಮತ್ತು ಸಿಂಧು ಎಂದು ಗುರುತಿಸಲಾಗಿದೆ. ಕಾರು, ಲಾರಿ ಮತ್ತು ಮೋರಿಯ ಗೋಡೆಗೆ ಡಿಕ್ಕಿಯಾಗಿದೆ. ಲಾರಿಯೂ ಸಹ ಪಲ್ಟಿಯಾಗಿದೆ. ಈ ವೇಳೆ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಕಾರಿನಲ್ಲಿದ್ದ ಸಿಂಧು ಮತ್ತು ಎರಡು ವರ್ಷದ ಪುಟ್ಟ ಮಗು ಅದರೊಳಗೇ ಸುಟ್ಟು ಹೋಗಿದ್ದಾರೆ.


