ಬೆಂಗಳೂರು: ವಿದೇಶಿ ಮೂಲದ ಯುವತಿಯರನ್ನು ಬಳಸಿಕೊಂಡು ನಡೆಸಲಾಗುತ್ತಿದ್ದ ಮಾದಕ ವಸ್ತು ವ್ಯವಹಾರ, ವೇಶ್ಯಾವಾಟಿಕೆಯನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಕೆ. ಆರ್. ಪುರಂ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಡ್ರಗ್ ಹಾಗೂ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಆಫ್ರಿಕಾ ಮೂಲದ ಇಬ್ಬರು ಯುವತಿಯರನ್ನು ರಕ್ಷಿಸಲಾಗಿದೆ.
ದಂಧೆ ನಡೆಸುತ್ತಿದ್ದವರು ಪರಾರಿಯಾಗಿದ್ದು, ಪತ್ತೆಗೆ ಬಲೆ ಬೀಸಲಾಗಿದೆ. ಯುವತಿಯರ ಪಾಸ್ ಪೋರ್ಟ್ ಕಸಿದಿಟ್ಟುಕೊಂಡು ದಂಧೆಗೆ ಬಳಸಿಕೊಳ್ಳುತ್ತಿದ್ದರು ಎಂದು ಗೊತ್ತಾಗಿದೆ.


