ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿರುವ ಸರ್ಕಾರಿ ದೈಹಿಕ ಶಿಕ್ಷಣ ಸಂಸ್ಥೆಯ ಸುಮಾರು 100 ವಿದ್ಯಾರ್ಥಿಗಳನ್ನು ಶಂಕಿತ ಫುಡ್ ಪೋಯ್ಸನ್ ನಿಂದ ಬಳಲುತ್ತಿದ್ದ ನಂತರ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಲಕ್ಷ್ಮೀಬಾಯಿ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಫಿಸಿಕಲ್ ಎಜುಕೇಶನ್ ನ ಸುಮಾರು 100 ವಿದ್ಯಾರ್ಥಿಗಳನ್ನು ಮಂಗಳವಾರ ಸರ್ಕಾರಿ ಜಯರೋಗ ಆಸ್ಪತ್ರೆಗೆ ಕರೆತರಲಾಯಿತು ಎಂದು ಅದರ ಅಧೀಕ್ಷಕ ಆರ್ ಕೆಎಸ್ ಧಕಡ್ ತಿಳಿಸಿದ್ದಾರೆ.
ಬಹುಶಃ ವಿಷಾಹಾರ ಸೇವನೆಯಿಂದ ಅವರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ. “ವಧ್ಯಾರ್ತಿಗಳು ಪನೀರ್ ಸಬ್ಜಿಯನ್ನು ಸೇವಿಸಿದ್ದಾರೆ. ಇದು ಆಹಾರ ವಿಷಕ್ಕೆ ಕಾರಣವಾಗಬಹುದು” ಎಂದು ಅವರು ತಿಳಿಸಿದ್ದಾರೆ.
ವಿದ್ಯಾರ್ಥಿಗಳಲ್ಲಿ ಕೆಲವರು ತೀವ್ರ ಅಸ್ವಸ್ಥರಾಗಿದ್ದಾರೆ, ಆದರೆ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಂಸ್ಥೆಯ ರಿಜಿಸ್ಟ್ರಾರ್ ಅಮಿತ್ ಯಾದವ್, ಮಂಗಳವಾರ ಕೆಲವು ವಿದ್ಯಾರ್ಥಿಗಳು ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಮತ್ತು ಅವರು ವೈರಲ್ ಜ್ವರದಿಂದ ಬಳಲುತ್ತಿದ್ದಾರೆ ಎಂದು ಶಂಕಿಸಲಾಗಿದೆ ಎಂದು ತಿಳಿಸಿದ್ದಾರೆ.
ಸುಮಾರು 70 ವಿದ್ಯಾರ್ಥಿಗಳು ಔಷಧೋಪಚಾರದ ನಂತರ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ, ಎಲ್ಲಾ ವಿದ್ಯಾರ್ಥಿಗಳು ವೈದ್ಯಕೀಯ ವೀಕ್ಷಣೆಯಲ್ಲಿದ್ದಾರೆ ಮತ್ತು ಅವರಲ್ಲಿ ಯಾರಿಗೂ ಅನಾರೋಗ್ಯ ಗಂಭೀರವಾಗಿಲ್ಲ ಎಂದು ಯಾದವ್ ಹೇಳಿದ್ದಾರೆ. ಮೆಸ್‌ನಲ್ಲಿ ವಿದ್ಯಾರ್ಥಿಗಳು ಸೇವಿಸುವ ಆಹಾರವನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.


