ಎಎಪಿ ಸಂಸದ ಸಂಜಯ್ ಸಿಂಗ್ ಅವರ ದೆಹಲಿ ಮನೆ ಮೇಲೆ ಇಡಿ ದಾಳಿ ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ. ಬೆಳಗ್ಗೆ 7 ಗಂಟೆ ಸುಮಾರಿಗೆ ಇಡಿ ತಂಡ ಸಿಂಗ್ ಅವರ ನಿವಾಸವನ್ನು ತಲುಪಿದೆ. ಅಬಕಾರಿ ನೀತಿಗೆ ಸಂಬಂಧಿಸಿದ ಪ್ರಕರಣದಲ್ಲಿ ಎಎಪಿ ನಾಯಕ ಮತ್ತು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದ್ದ ದಿನವೇ ಸಂಸದರ ಮನೆ ಮೇಲೆ ದಾಳಿ ನಡೆದಿದೆ.
2020 ರಲ್ಲಿ ಮದ್ಯದ ಅಂಗಡಿಗಳು ಮತ್ತು ವ್ಯಾಪಾರಿಗಳಿಗೆ ಪರವಾನಗಿ ನೀಡುವ ದೆಹಲಿ ಸರ್ಕಾರದ ನಿರ್ಧಾರದಲ್ಲಿ ಸಂಜಯ್ ಸಿಂಗ್ ಭಾಗಿಯಾಗಿದ್ದಾರೆ ಎಂದು ವರದಿಯಾಗಿದೆ. ರಾಜ್ಯದ ಬೊಕ್ಕಸಕ್ಕೆ ನಷ್ಟ ಉಂಟು ಮಾಡುವುದು ಮತ್ತು ಭ್ರಷ್ಟಾಚಾರ ನಿಗ್ರಹ ಕಾನೂನು ಉಲ್ಲಂಘನೆ ಆರೋಪಗಳು
ಇದೇ ವೇಳೆ ಎಎಪಿ ನಾಯಕ ಮನೀಶ್ ಸಿಸೋಡಿಯಾ ಇದೇ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬಿಜೆಪಿಯು ಎಎಪಿ ನಾಯಕರನ್ನು ಸುಳ್ಳು ಆರೋಪದ ಮೇಲೆ ಜೈಲಿಗೆ ತಳ್ಳಿದೆ ಎಂದು ಆರೋಪಿಸಿದರು.


