ಚಾಮರಾಜನಗರ: ಸಾಮಾಜಿಕ ಜಾಲಾತಾಣದಲ್ಲಿ ರೀಲ್ಸ್ ಮೂಲಕ ಗಮನ ಸೆಳೆಯುತ್ತಿದ್ದ ಯುವಕ ಬೈಕ್ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಯಳಂದೂರು ತಾಲೂಕಿನ ಗುಂಬಳ್ಳಿ ಬಳಿ ನಡೆದಿದೆ.
ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಕೃಷ್ಣಾಪುರದ ಮಹೇಶ್(24) ಮೃತ ದುರ್ದೈವಿ. ನಿಯಂತ್ರಣ ತಪ್ಪಿ ಮರವೊಂದಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಯುವಕ ಅಸುನೀಗಿದ್ದಾನೆ.
ಈತ ಎಳನೀರು ಕೀಳುವ ಕೆಲಸ ಮಾಡುವ ಜೊತೆಗೆ ರೀಲ್ಸ್ ಮಾಡುವ ಹವ್ಯಾಸ ಬೆಳೆಸಿಕೊಂಡಿದ್ದರು. ಡ್ಯಾನ್ಸ್, ಸ್ಟಂಟ್ ಗಳನ್ನು ರೀಲ್ಸ್ ಮಾಡಿ ಗಮನ ಸೆಳೆಯುತ್ತಿದ್ದರು. ಯಳಂದೂರು ಪೊಲೀಸರು ಸದ್ಯ ಶವವನ್ನು ಮರಣೋತ್ತರ ಪರೀಕ್ಷೆ ರವಾನಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.


