nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿರಾಗೇಟ್ ರಸ್ತೆಯಲ್ಲಿ ಕೊಳೆತ ಬೂದುಗುಂಬಳಕಾಯಿ: ಸಾರ್ವಜನಿಕರ ಗೋಳು, ಜಿಲ್ಲಾಡಳಿತ, ಪಾಲಿಕೆಯ ಜಾಣ ಕುರುಡು!

    October 24, 2026

    ಕೆಪಿಎಸ್‌ ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಸಮ್ಮತಿ

    October 24, 2026

    ಸ್ಟಿಂಗ್ ಆಪರೇಷನ್ — ಕೆಪಿಎಸ್‌ಸಿ ಹಗರಣ | ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ

    October 24, 2026
    Facebook Twitter Instagram
    ಟ್ರೆಂಡಿಂಗ್
    • ಶಿರಾಗೇಟ್ ರಸ್ತೆಯಲ್ಲಿ ಕೊಳೆತ ಬೂದುಗುಂಬಳಕಾಯಿ: ಸಾರ್ವಜನಿಕರ ಗೋಳು, ಜಿಲ್ಲಾಡಳಿತ, ಪಾಲಿಕೆಯ ಜಾಣ ಕುರುಡು!
    • ಕೆಪಿಎಸ್‌ ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಸಮ್ಮತಿ
    • ಸ್ಟಿಂಗ್ ಆಪರೇಷನ್ — ಕೆಪಿಎಸ್‌ಸಿ ಹಗರಣ | ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ
    • ಶ್ರವಣೂರಿನಲ್ಲಿ 2ನೇ ವರ್ಷದ ಉಚಿತ ಕಣ್ಣಿನ ತಪಾಸಣೆ — ಶಸ್ತ್ರಚಿಕಿತ್ಸಾ ಶಿಬಿರ
    • ಬಳತ (ಬಿ) ಗ್ರಾಮ ಪಂಚಾಯತ್ನಲ್ಲಿ ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ: ‘ವಿಬಿ–ಜಿ ರಾಮ್ ಜಿ’ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಕರೆ
    • ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ
    • ನಂದಿಧ್ವಜ ಕಂಬ ಮುರಿತದಿಂದ ಮಾವುತನ ಪತ್ನಿ ಸಾವು ತನಕ! ಈ ಬಾರಿಯ ಮೈಸೂರು ದಸರಾದಲ್ಲಿ ನಡೆದಿದ್ದೇನು?
    • ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಿಂದಿನ  ಬಿಜೆಪಿ ಸರಕಾರ ಕೋಮು ಘಟನೆಯ ಸಾವಿರಾರು ಪ್ರಕರಣಗಳನ್ನು ಕೈಬಿಟ್ಟಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು
    ರಾಜ್ಯ ಸುದ್ದಿ October 4, 2023

    ಹಿಂದಿನ  ಬಿಜೆಪಿ ಸರಕಾರ ಕೋಮು ಘಟನೆಯ ಸಾವಿರಾರು ಪ್ರಕರಣಗಳನ್ನು ಕೈಬಿಟ್ಟಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು

    By adminOctober 4, 2023No Comments2 Mins Read
    dk shivakumar

    ಬೆಂಗಳೂರು: “ಹಿಂದಿನ ಬಿಜೆಪಿ ಸರಕಾರ ಕೋಮು ಘಟನೆಗೆ ಸಂಬಧಪಟ್ಟ ಸಾವಿರಾರು ಪ್ರಕರಣಗಳನ್ನು ಕೈಬಿಟ್ಟಿದೆ. ಜತೆಗೆ ಸಾವಿರಾರು ರೌಡಿ ಶೀಟರ್ ‌ಗಳನ್ನು ಬೀದಿಗೆ ಬಿಟ್ಟಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿರುಗೇಟು ನೀಡಿದ್ದಾರೆ.

    ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳು, ಗಲಭೆ ಪ್ರಕರಣ ಹಿಂಪಡೆಯುವಂತೆ ನೀವು ಪತ್ರ ಬರೆದಿದ್ದೀರಾ ಎನ್ನುವುದನ್ನು ಬಿಜೆಪಿ ಅಸ್ತ್ರವಾಗಿಸಿಕೊಂಡಿದೆ ಎಂದು ಕೇಳಿದ ಪ್ರಶ್ನೆಗೆ ಶಿವಕುಮಾರ್ ಅವರು ಬುಧವಾರ ಉತ್ತರಿಸಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಿಂಪಡೆಯಲಾದ ಕೋಮು ಪ್ರಕರಣಗಳ ಬಗ್ಗೆ ಮಾಹಿತಿ ನೀಡಿದರು. “ಬಿಜೆಪಿಯವರಿಗೆ ತಮ್ಮ ಮನೆ ಹುಳುಕು, ದೋಸೆ ತೂತು ಕಾಣುತ್ತಿಲ್ಲ. ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡದವರು ನಮಗೆ ಪ್ರಶ್ನೆ ಮಾಡುತ್ತಿದ್ದಾರೆ” ಎಂದು  ವ್ಯಂಗ್ಯವಾಡಿದರು.

    “ಬಿಜೆಪಿಯವರು ಅವರ ಅಧಿಕಾರವಧಿಯಲ್ಲಿ ಏನೇನು ಮಾಡಿದರು ಎಂಬುದು ಜನರಿಗೆ ಗೊತ್ತಿಲ್ಲ ಎಂದು ತಿಳಿದುಕೊಂಡಿದ್ದಾರೆ. ಜನ ಅವರನ್ನು ಎಲ್ಲಿ ಕೂರಿಸಬೇಕೊ ಅಲ್ಲಿ ಕೂರಿಸಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಯಾವ,  ಯಾವ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಮನವಿ ಮಾಡಿದವರ ಪಟ್ಟಿ ನಮ್ಮ ಬಳಿ ಇದೆ. ಬಸವರಾಜ ಬೊಮ್ಮಾಯಿ, ಅರಗ ಜ್ಞಾನೇಂದ್ರ, ಮಾಧುಸ್ವಾಮಿ ಅವರು ಸೇರಿದಂತೆ ಅನೇಕರು ಮನವಿ ಮಾಡಿದ್ದರು. 2023   ರ ಜನವರಿ ಹಾಗೂ ಫೆಬ್ರವರಿ ತಿಂಗಳಿನಲ್ಲಿ  7,361 ರೌಡಿಶೀಟರ್‌ಗಳನ್ನು ಪಟ್ಟಿಯಿಂದ ಕೈ ಬಿಟ್ಟಿದ್ದೇ ಬಿಜೆಪಿ ಸರ್ಕಾರ. ಅವರು ಈಗ ನಮಗೆ ಬುದ್ಧಿ ಹೇಳಲು ಬರುತ್ತಿದ್ದಾರೆ” ಎಂದು ತಿಳಿಸಿದರು.

    “ಬಿಜೆಪಿಯವರು ಅವರ ಕಾರ್ಯಕರ್ತರ ಪರವಾಗಿ ರಾಜಕಾರಣ ಮಾಡಿದ್ದಾರೆ. ನಾವು ಕಾನೂನು ಪ್ರಕಾರ ನಡೆದುಕೊಳ್ಳುತ್ತಿದ್ದೇವೆ. ಅಮಾಯಕರ ಮೇಲೆ ಇರುವ ಪ್ರಕರಣಗಳನ್ನು ಮಾತ್ರ ಪರಿಶೀಲನೆ ಮಾಡುತ್ತಿದ್ದೇವೆ. ಕಾನೂನಿನ ಚೌಕಟ್ಟಿನಲ್ಲಿ ಮಾಡಲು ಅವಕಾಶವಿದ್ದರೇ ಮಾಡಬಹುದು ಎಂದು ಅಧಿಕಾರಿಗಳು ಶಿಫಾರಸ್ಸು ಮಾಡುತ್ತಾರೆ. ಇದಕ್ಕೆಂದೇ ಸಮಿತಿ ಇದೆ. ಅವರು ವರದಿ ನೀಡಿದ ಮೇಲೆ ತೀರ್ಮಾನ ಮಾಡಲಾಗುತ್ತದೆ” ಎಂದು ಹೇಳಿದರು.

    ಪ್ರಕರಣಗಳನ್ನು ಹಿಂಪಡೆಯಲು ಸರ್ಕಾರ ಆತುರಲ್ಲಿ ಇದೆಯೇ ಎನ್ನುವ ಪ್ರಶ್ನೆಗೆ, “ನನ್ನ ಮೇಲೂ ಸಾಕಷ್ಟು ಪ್ರಕರಣಗಳು ಇವೆ, ಈಗಲೂ ಅನೇಕ ಚಾಲ್ತಿಯಲ್ಲಿವೆ. ಅನೇಕ ಪ್ರಕರಣಗಳನ್ನು ರಾಜಕೀಯ ಉದ್ದೇಶಕ್ಕೆ ಹಾಕಲಾಗಿದೆ. ಪ್ರಕರಣ ಹಿಂಪಡೆಯಲು ನಮಗೆ ಏನೂ ಅವಸರ ಇಲ್ಲ, ಬಿಜೆಪಿಯವರೇ ತರಾತುರಿಯಲ್ಲಿ ಇದ್ದಾರೆ. ನೀವು (ಮಾಧ್ಯಮದವರು) ಅವರನ್ನು ಪ್ರತಿದಿನ ತೋರಿಸುತ್ತಾ ಇದ್ದೀರಿ. ಅದಕ್ಕೆ ಅವರು ಆ ರೀತಿ ಹೇಳುತ್ತಿದ್ದಾರೆ” ಎಂದರು.

    “ಯಾರ್ಯಾರು ಪ್ರಕರಣ ಹಿಂಪಡೆಯಲು ಪತ್ರ ಬರೆದಿದ್ದರು, ಸಹಿ ಹಾಕಿದ್ದರು ಆ ಪತ್ರಗಳನ್ನೆಲ್ಲಾ ಮುಂದಿಡಲೇ? ನಾನು ಹೆಸರಿಸಿದವರು ಗಲಭೆ ಪ್ರಕರಣಗಳನ್ನು ಹಿಂಪಡೆಯಲು ಶಿಫಾರಸ್ಸು ಮಾಡಿಲ್ಲ ಎಂದು ಹೇಳಲಿ. ಅವರೇ ಬರೆದಿರುವ ಪತ್ರಗಳನ್ನು ಬಿಡುಗಡೆ ಮಾಡುತ್ತೇನೆ” ಎಂದು ಸವಾಲು ಹಾಕಿದರು.

     

    admin
    • Website

    Related Posts

    ಕೆಪಿಎಸ್‌ ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಸಮ್ಮತಿ

    October 24, 2026

    ಸ್ಟಿಂಗ್ ಆಪರೇಷನ್ — ಕೆಪಿಎಸ್‌ಸಿ ಹಗರಣ | ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ

    October 24, 2026

    ನಂದಿಧ್ವಜ ಕಂಬ ಮುರಿತದಿಂದ ಮಾವುತನ ಪತ್ನಿ ಸಾವು ತನಕ! ಈ ಬಾರಿಯ ಮೈಸೂರು ದಸರಾದಲ್ಲಿ ನಡೆದಿದ್ದೇನು?

    October 24, 2026

    Comments are closed.

    Our Picks

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026

    ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?

    October 24, 2026

    ವಾಟ್ಸಾಪ್ ಬಳಕೆದಾರರೇ ಎಚ್ಚರ! 2027ರಿಂದ ಹೊಸ ನಿಯಮ, ಫೋನ್‌ ನಲ್ಲಿ ಸಿಮ್ ಇಲ್ಲದಿದ್ದರೆ ಆ್ಯಪ್ ಬಳಕೆಗೆ ತೊಂದರೆ

    October 24, 2026

    ಹೊಸದಾಗಿ ಕೆಲಸಕ್ಕೆ ಸೇರಿದವರಿಗೆ ₹15,000 ಸಿಗುತ್ತಾ? ಕೇಂದ್ರದ ಉದ್ಯೋಗ ಯೋಜನೆಯ ಅರ್ಹತೆಗಳೇನು?

    October 21, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಶಿರಾಗೇಟ್ ರಸ್ತೆಯಲ್ಲಿ ಕೊಳೆತ ಬೂದುಗುಂಬಳಕಾಯಿ: ಸಾರ್ವಜನಿಕರ ಗೋಳು, ಜಿಲ್ಲಾಡಳಿತ, ಪಾಲಿಕೆಯ ಜಾಣ ಕುರುಡು!

    October 24, 2026

     ನಟರಾಜು ಜಿ. ಎಲ್., ನಮ್ಮ ತುಮಕೂರು ಡಿಜಿಟಲ್ ಸುದ್ದಿ ಮಾಧ್ಯಮ ಹಬ್ಬಗಳು ಬರುತ್ತವೆ, ಸಂಭ್ರಮ-ಸಡಗರವನ್ನು ಹೊತ್ತು ತರುತ್ತವೆ. ಜನ ಪರಸ್ಪರ…

    ಕೆಪಿಎಸ್‌ ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಸಮ್ಮತಿ

    October 24, 2026

    ಸ್ಟಿಂಗ್ ಆಪರೇಷನ್ — ಕೆಪಿಎಸ್‌ಸಿ ಹಗರಣ | ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ

    October 24, 2026

    ಶ್ರವಣೂರಿನಲ್ಲಿ 2ನೇ ವರ್ಷದ ಉಚಿತ ಕಣ್ಣಿನ ತಪಾಸಣೆ — ಶಸ್ತ್ರಚಿಕಿತ್ಸಾ ಶಿಬಿರ

    October 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.