ಮಧ್ಯಪ್ರದೇಶ: ಕೇಂದ್ರ ಸರ್ಕಾರ ಮಹಿಳೆಯರನ್ನು ತಮಾಷೆಯಾಗಿ ಪರಿಗಣಿಸುತ್ತಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದರು.
ಗುರುವಾರ ಮಧ್ಯಪ್ರದೇಶದ ಧಾರ್ ಜಿಲ್ಲೆಯ ಮೋಹನ್ ಖೇಡಾದಲ್ಲಿ ನಡೆದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮಹಿಳಾ ಮೀಸಲಾತಿ ಮಸೂದೆಯನ್ನು ತಕ್ಷಣವೇ ಜಾರಿಗೆ ತರಲು ಸಾಧ್ಯವಾಗದಿದ್ದರೆ, ಈ ಹಂತದಲ್ಲಿ ಏಕೆ ಮಂಡಿಸಲಾಗಿದೆ? ಎಂದು ಪ್ರಶ್ನಿಸಿದರು.
ಬಿಜೆಪಿ ಸರ್ಕಾರ ಮಹಿಳಾ ಮೀಸಲಾತಿ ಮಸೂದೆಯನ್ನು ತಂದಿದೆ. ನಾವೆಲ್ಲರೂ ಸಹ ಅದನ್ನು ಬೆಂಬಲಿಸಿದ್ದೇವೆ. ಆದರೆ ಅದಕ್ಕೂ ಮೊದಲು ಜನಗಣತಿ ನಡೆಸಲಾಗುವುದು, ಕಾಯ್ದೆಯನ್ನು 10 ವರ್ಷಗಳವರೆಗೆ ಜಾರಿಗೆ ತರುವುದಿಲ್ಲ ಎಂದು ಸರ್ಕಾರ ಹೇಳಿದೆ. ಹಾಗಾದರೆ ಈ ಘೋಷಣೆಯ ಅರ್ಥವೇನು? ಎಂದು ಅವರು ಪ್ರಶ್ನಿಸಿದರು.


