ತುಮಕೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಹಾಗೂ ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದ ಪತಿ ಪತ್ನಿ ಇಬ್ಬರೂ ಕೂಡ ನೇಣು ಬಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ರೊಪ್ಪ ಗ್ರಾಮದಲ್ಲಿ ನಡೆದಿದೆ.
ರೊಪ್ಪ ಗ್ರಾಮದಲ್ಲಿ ವಾಸವಿದ್ದ ಮನು (26) ಹಾಗೂ ಪವಿತ್ರ (24) ಮೃತ ದುರ್ದೈವಿಗಳು. ಮನು, ಪವಿತ್ರ ತಾವು ವಾಸವಿದ್ದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಪವಿತ್ರಾಳ ವೇಲಿನಲ್ಲೇ ಬಿಗಿದುಕೊಂಡು ಪತಿ-ಪತ್ನಿ ಅಸುನೀಗಿದ್ದಾರೆ. ದಂಪತಿ ಆತ್ಮಹತ್ಯೆಗೆ ಕುಟುಂಬದಲ್ಲಿ ಹಾರ್ದಿಕ ಸಂಕಷ್ಟದಿಂದ ಬಳಲುತ್ತಿದ್ದರು ಎಂಬುದು ಪೊಲೀಸರ ಪ್ರಾಥಮಿಕ ವರದಿಯಿಂದ ತಿಳಿದು ಬಂದಿದೆ.
ಮೂರು ವರ್ಷದ ಹಿಂದೆ ಮನು ಹಾಗೂ ಪವಿತ್ರ ಮದುವೆಯಾಗಿದ್ದರು. ಎಂದಿನಂತೆ ಮನೆಯಿಂದ ಹೊರಬಾರದೆ ಇದ್ದಾಗ ಸ್ಥಳೀಯ ಅನುಮಾನಿಸಿ ನೋಡಿದಾಗ ವಿಷಯ ಬೆಳಕಿಗೆ ಬಂದಿದೆ. ಸ್ಥಳೀಯರು ಮಾಹಿತಿ ನೀಡಿದ ಮೇರೆಗೆ ಪಾವಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇಬ್ಬರ ಮೃತದೇಹವನ್ನು ಕೆಳಗಿಸಿದ್ದು, ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪಾವಗಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


