ಕೌಟುಂಬಿಕ ದೌರ್ಜನ್ಯ ಕಾಯ್ದೆಯ ಸೆಕ್ಷನ್ 12ರ ಪ್ರಕಾರ ಗಂಡನಿಂದ ವಿಚ್ಛೇದನ ಪಡೆಯಲು ಅರ್ಜಿ ಸಲ್ಲಿಸಿದ ಪತ್ನಿಯು, ಬೇರೆ ಪುರುಷನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದರೆ, ಜೀವನಾಂಶ ಪಡೆಯಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತಿಳಿಸಿದೆ.
ಆ ಮೂಲಕ ವಿಚ್ಛೇದಿತ ಪತಿಯಿಂದ ಜೀವನಾಂಶ ಕೋರಿ ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.
ಪತ್ನಿಗೆ ಜೀವನಾಂಶ ನೀಡುವಂತೆ ಪತಿಗೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನೀಡಿದ್ದ ಆದೇಶವನ್ನು ನ್ಯಾ. ರಾಜೇಂದ್ರ ಬಾದಾಮಿಕರ್ ವಿಚಾರಣೆ ನಡೆಸಿದರು


