ಪೊಲೀಸ್ ಕಾರ್ಯನಿರ್ವಹಣೆ ಸುಗಮಗೊಳಿಸಲು ಎಡಿಜಿಪಿ ಮತ್ತು ಐಜಿಪಿಗಳು ತಲಾ ಎರಡು ಜಿಲ್ಲೆಗಳಿಗೆ ಭೇಟಿ ನೀಡಿ ಅಪರಾಧ ಪ್ರಕರಣಗಳನ್ನು ಪರಿಶೀಲನೆ ನಡೆಸಬೇಕೆಂದು ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಸೂಚನೆ ನೀಡಿದ್ದಾರೆ.
ಪೊಲೀಸ್ ಠಾಣೆಗಳಲ್ಲಿನ ಸಾಮಾಜಿಕ ಮಾಧ್ಯಮ ಮೇಲ್ವಿಚಾರಣಾ ವಿಭಾಗಗಳ ಕಾರ್ಯನಿರ್ವಹಣೆಯ ಪರಿಶೀಲನೆ ಮತ್ತು ಕ್ರಮಗಳನ್ನು ಒಳಗೊಂಡಿರುವ ಕಾರ್ಯಗಳ ಪಟ್ಟಿಯನ್ನು ಅಧಿಕಾರಿಗಳಿಗೆ ಅಲೋಕ್ ಮೋಹನ್ ಅವರು ನೀಡಿದ್ದಾರೆ.


