nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ

    February 28, 2026

    ಕರ್ನಾಟಕ ಮಾದರ ಮಹಾಸಭಾ ತಾಲ್ಲೂಕು ನೂತನ ಅಧ್ಯಕ್ಷರಾಗಿ ವಿಭೂತಿ ಸಿದ್ದಪ್ಪ ನೇಮಕ

    February 28, 2026

    ಧಾರವಾಡ:  ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ

    February 28, 2026
    Facebook Twitter Instagram
    ಟ್ರೆಂಡಿಂಗ್
    • ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ
    • ಕರ್ನಾಟಕ ಮಾದರ ಮಹಾಸಭಾ ತಾಲ್ಲೂಕು ನೂತನ ಅಧ್ಯಕ್ಷರಾಗಿ ವಿಭೂತಿ ಸಿದ್ದಪ್ಪ ನೇಮಕ
    • ಧಾರವಾಡ:  ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ
    • ಉದ್ಯೋಗ ಪಡೆಯಲು ಯುವಕರ ಪ್ರಯತ್ನ ನಿರಂತರವಾಗಿರಲಿ: ಶಾಸಕ ಎಸ್.ಎನ್.ಚನ್ನಬಸಪ್ಪ
    • ಬಳ್ಳಾರಿ: ಟ್ರಾಫಿಕ್ ಸಮಸ್ಯೆ ಹಂತ–ಹಂತವಾಗಿ ಪರಿಹಾರ ಕ್ರಮ: ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್
    • ಬಳ್ಳಾರಿ:  ಪಠ್ಯಪುಸ್ತಕಗಳು ಶೈಕ್ಷಣಿಕ ವ್ಯವಸ್ಥೆಯಲ್ಲಿ ಮುಖ್ಯ ಪಾತ್ರ ವಹಿಸುತ್ತವೆ: ಪ್ರೊ.ಎಂ.ಮುನಿರಾಜು
    • “ಕೆಪಿಎಸ್ ಮ್ಯಾಗ್ನೆಟ್ ವಿರುದ್ಧ, “ನಮ್ಮೂರ ಸರ್ಕಾರಿ ಶಾಲೆ ಉಳಿಸಿ” : ಪೋಸ್ಟರ್ ಬಿಡುಗಡೆ!
    • ಎಸ್ ಸಿ ಕಾಲೋನಿಗಳಲ್ಲಿ ವರ್ಷದಿಂದ ಸ್ವಚ್ಛತೆಗೆ ಮುಂದಾಗದ ಅಧಿಕಾರಿಗಳು:  ಹೊಳವನಹಳ್ಳಿಯಲ್ಲಿ ಸ್ವಚ್ಛತೆಯೇ ಮಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಂಗಳೂರು ಟ್ರಾಫಿಕ್ ಸುಧಾರಿಸಲು ಮೆಟ್ರೋ  ಇನ್ನಿತರೆ ಸಾರಿಗೆ ವ್ಯವಸ್ಥೆಗಳ ಸಂಪರ್ಕ ಕೊಂಡಿ ಯೋಜನೆ ಅಗತ್ಯ: ಡಿ.ಕೆ.ಶಿವಕುಮಾರ್
    ರಾಜ್ಯ ಸುದ್ದಿ October 7, 2023

    ಬೆಂಗಳೂರು ಟ್ರಾಫಿಕ್ ಸುಧಾರಿಸಲು ಮೆಟ್ರೋ  ಇನ್ನಿತರೆ ಸಾರಿಗೆ ವ್ಯವಸ್ಥೆಗಳ ಸಂಪರ್ಕ ಕೊಂಡಿ ಯೋಜನೆ ಅಗತ್ಯ: ಡಿ.ಕೆ.ಶಿವಕುಮಾರ್

    By adminOctober 7, 2023No Comments1 Min Read
    dk shivakumar

    ಬೆಂಗಳೂರು: ವಾರದಲ್ಲಿ ಮೂರು ದಿನ ಬೆಂಗಳೂರಿನಲ್ಲಿ ಹೆಚ್ಚು ಸಂಚಾರ ದಟ್ಟಣೆಯಾಗುತ್ತಿದ್ದು, ಇದನ್ನು ಸುಧಾರಿಸಲು ಮೆಟ್ರೋ ಇನ್ನಿತರೆ ಸಾರಿಗೆ ವ್ಯವಸ್ಥೆಗಳ ಸಂಪರ್ಕಕೊಂಡಿ ಯೋಜನೆ ಅಗತ್ಯವಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

    ಹೊರ ವರ್ತುಲ ರಸ್ತೆಯ ಸಂಚಾರ ದಟ್ಟಣೆ ನಿವಾರಣೆಗೆ ಹೊರವರ್ತುಲ ರಸ್ತೆ ಕಂಪನಿಗಳ ಸಂಘದ (ORRCA) ಸದಸ್ಯರೊಂದಿಗೆ ಕಾಡುಬೀಸನಹಳ್ಳಿಯಲ್ಲಿ ನಡೆದ ಸಂವಾದ ಸಭೆಯಲ್ಲಿ ಅವರು ಹೇಳಿದ್ದಿಷ್ಟು:“ಜನರ ಸಮಯ ರಸ್ತೆಗಳಲ್ಲಿ ವ್ಯರ್ಥವಾಗಲು ನಮ್ಮ ಸರ್ಕಾರ ಬಿಡುವುದಿಲ್ಲ. ಬೆಂಗಳೂರಿನ ಐದನೇ ಒಂದು ಭಾಗದಷ್ಟು ಆದಾಯ ಹೊರ ವರ್ತುಲ ರಸ್ತೆಯ ಉದ್ದಿಮೆಗಳಿಂದಲೇ ಬರುತ್ತಿದೆ.  ನಮಗೆ ಬೆಂಗಳೂರಿನ ಹಾಗೂ ಹೊರ ವರ್ತುಲ ರಸ್ತೆಯ ಉದ್ದಿಮೆಗಳ ಮಹತ್ವ ಮತ್ತಿತರ ವಿಚಾರಗಳ ಬಗ್ಗೆ ಅರಿವಿದೆ. ನಿಮಗೆ ಹಾಗೂ ನಿಮ್ಮ ನೌಕರರರಿಗೆ, ಆ ಭಾಗದ ನಿವಾಸಿಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ಸಮಸ್ಯೆ ನಿವಾರಿಸುವುದೇ ನಮ್ಮ ಆದ್ಯತೆ.


    Provided by
    Provided by

    ಹೆಚ್ಚು ಸಂಚಾರ ದಟ್ಟಣೆ ಉಂಟಾಗುವ 6 ರಿಂದ 8 ಸ್ಥಳಗಳನ್ನು ಈಗಾಗಲೇ ಗುರುತಿಸಲಾಗಿದ್ದು, ಸಂಚಾರ ದಟ್ಟಣೆಗೆ ಇರುವ ಸಮಸ್ಯೆಗಳನ್ನು ಮೊದಲು ನಿವಾರಿಸಲಾಗುವುದು. ಮುಂದಿನ ಮೂರು ತಿಂಗಳಲ್ಲಿ ರಸ್ತೆ ಗುಂಡಿ ಸಮಸ್ಯೆ ಹಾಗೂ ಸಂಚಾರ ದಟ್ಟಣೆಗೆ ಕಾರಣವಾಗಿರುವ ಅನಧಿಕೃತ ಅಂಗಡಿ- ಮುಂಗಟ್ಟುಗಳನ್ನು ಗುರುತಿಸಿ ಯಾವುದೇ ರಾಜಕೀಯ ಒತ್ತಡಕ್ಕೆ ಒಳಗಾಗದೆ ತೆರವುಗೊಳಿಸಲಾಗುವುದು.

    ಬೆಂಗಳೂರು ಯೋಜಿತ ನಗರವಲ್ಲ. ಕಳೆದ 30 ವರ್ಷಗಳಲ್ಲಿ ಹೆಚ್ಚು ಬೆಳವಣಿಗೆ ಕಂಡಿದೆ. ಇಲ್ಲಿ ಸಂಚಾರ ದಟ್ಟಣೆಯೊಂದೆ ಸಮಸ್ಯೆಯಲ್ಲ, ಘನತ್ಯಾಜ್ಯ ನಿರ್ವಹಣೆ, ಕುಡಿಯುವ ನೀರು, ವಸತಿ ಸೇರಿದಂತೆ ಅನೇಕ ಸಮಸ್ಯೆಗಳನ್ನು ಈ ನಗರ ಹೊಂದಿದೆ. ಇಷ್ಟೆಲ್ಲಾ ಸಮಸ್ಯೆಗಳನ್ನು ಬಗೆಹರಿಸುವ ಸವಾಲು ನಮ್ಮ ಮುಂದಿದೆ.

    ಬೆಂಗಳೂರಿನ ಪೊಲೀಸ್, ಬಿಬಿಎಂಪಿ, ಬಿಡಿಎ, ಮೆಟ್ರೋ ಕಮಿಷನರ್‌ಗಳಿಗೆ ಸಂಚಾರ ದಟ್ಟಣೆ ಬಗ್ಗೆ ಅರಿವಿದೆ, ಅವರುಗಳು ಸಹ ಸರ್ಕಾರದ ಒತ್ತಾಸೆಯಂತೆ ಕೆಲಸ ಮಾಡಲಿದ್ದಾರೆ. ಹೊರವರ್ತುಲ ರಸ್ತೆಯ ದಟ್ಟಣೆ ಕಡಿಮೆ ಮಾಡಲು ಕೆಲವು ಸ್ಥಳಗಳನ್ನು ಗುರುತಿಸಿದ್ದೇವೆ. ಎಲ್ಲರೂ ಸೇರಿ ಜವಾಬ್ದಾರಿಯಿಂದ ಸಮಸ್ಯೆಗೆ ಪರಿಹಾರ ನೀಡಬೇಕಿದೆ.” ಎಂದು ಹೇಳಿದರು.

    admin
    • Website

    Related Posts

    ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್

    February 27, 2026

    ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

    February 27, 2026

    ಶಿವಮೊಗ್ಗದಲ್ಲಿ ಶಾಲಾ ಬಾಲಕನ ಭೀಕರ ಹತ್ಯೆ: 7 ಅಪ್ರಾಪ್ತರ ಬಂಧನ, 15 ಲಕ್ಷ ರೂ. ಪರಿಹಾರ ಘೋಷಣೆ

    February 25, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ

    February 28, 2026

    ಕೊರಟಗೆರೆ : ತಾಲ್ಲೂಕಿನ ಅಕ್ಕಿರಾಂಪುರದ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ…

    ಕರ್ನಾಟಕ ಮಾದರ ಮಹಾಸಭಾ ತಾಲ್ಲೂಕು ನೂತನ ಅಧ್ಯಕ್ಷರಾಗಿ ವಿಭೂತಿ ಸಿದ್ದಪ್ಪ ನೇಮಕ

    February 28, 2026

    ಧಾರವಾಡ:  ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ

    February 28, 2026

    ಉದ್ಯೋಗ ಪಡೆಯಲು ಯುವಕರ ಪ್ರಯತ್ನ ನಿರಂತರವಾಗಿರಲಿ: ಶಾಸಕ ಎಸ್.ಎನ್.ಚನ್ನಬಸಪ್ಪ

    February 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.