ಬೆಂಗಳೂರು: ಮಾಜಿ ಪ್ರಿಯತಮೆಯ ಕಾಟಕ್ಕೆ ಬೇಸತ್ತ ಯುವಕನೊಬ್ಬ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ರಾಮಮೂರ್ತಿ ನಗರದಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಸಂತೋಷ್ ದೊಡ್ಡಮನಿ (28) ಆತ್ಮಹತ್ಯೆ ಮಾಡಿಕೊಂಡವನು. ಆತನ ಸಹೋದರ ಸುಭಾಷ್ ನೀಡಿದ ದೂರಿನನ್ವಯ ಇಬ್ಬರು ಯುವತಿಯ ವಿರುದ್ಧ ರಾಮಮೂರ್ತಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ತನಿಖೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


