ಬೆಂಗಳೂರು: 13 ಮಂದಿ ಬಲಿ ತೆಗೆದುಕೊಂಡಿರುವ ಪಟಾಕಿ ದುರಂತ ನಡೆದ ಅತ್ತಿಬೆಲೆಗೆ ಡಿಸಿಎಂ ಡಿಕೆಶಿ ಶನಿವಾರ ರಾತ್ರಿ ಭೇಟಿ ನೀಡಿ, ಅಧಿಕಾರಿಗಳಿಂದ ಮಾಹಿತಿ ಪಡೆದರು. ಇದೊಂದು ಘೋರ ದುರಂತ. ಅಮಾಯಕ ಯುವಕರು ಮೃತಪಟ್ಟಿದ್ದಾರೆ. ಕೆಲವರು ವ್ಯಾಪಾರ ಮಾಡಲು ಬಂದಿದ್ದವರೂ ಇದ್ದರು. 13 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಜತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದೇನೆ. ಸತ್ತವರ ಕುಟುಂಬಕ್ಕೆ ಸರಕಾರದಿಂದ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದರು.


