ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ನಡೆಸುತ್ತಿರುವ ಮಾರ್ಚ್ 2024ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಜಿಲ್ಲೆಯ ಎಲ್ಲಾ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಮಾತ್ರ ಖಾಸಗಿ ಅಭ್ಯರ್ಥಿಯಾಗಿ ನೊಂದಾಯಿಸಿಕೊಂಡು ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿಕೊಡಲಾಗಿದೆ.
ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳು ತಮ್ಮ ವಾಸ ಸ್ಥಳದ ಹತ್ತಿರ ಇರುವ ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಮಾತ್ರ ಖಾಸಗಿ ಅಭ್ಯರ್ಥಿಗಳಾಗಿ ನೊಂದಾಯಿಸಿಕೊಳ್ಳಲು ಸೂಚಿಸಿದೆ.


