ಇಸ್ರೇಲ್ ಮೇಲೆ ಪ್ಯಾಲೇಸ್ತೀನ್ ನ ಹಮಾಸ್ ಉಗ್ರರು ಭೀಕರ ರಾಕೆಟ್ ದಾಳಿ ನಡೆಸಿದ್ದರಿಂದ ಇಸ್ರೇಲ್ ಯುದ್ಧ ಘೋಷಿಸಿದೆ. ಇದರಿಂದ ಇಸ್ರೇಲ್ ನಲ್ಲಿ ನೆಲೆಸಿರುವ ಕನ್ನಡಿಗರು ಸೇರಿ ಸಾವಿರಾರು ಭಾರತೀಯರು ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಅಲ್ಲಿನ ಕನ್ನಡಿಗರ ನೆರವಿಗಾಗಿ ರಾಜ್ಯ ಸರ್ಕಾರ ಸಹಾಯವಾಣಿ ತೆರೆದಿದೆ.
ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಜತೆ ನಿಕಟ ಸಂಪರ್ಕದಲ್ಲಿದ್ದೇವೆ. ಕೇಂದ್ರದ ಸಹಾಯವಾಣಿ 080 22340676, 080 22253707 ಸಂಪರ್ಕಿಸಬಹುದು ಎಂದು ಸಿಎಂ ತಿಳಿಸಿದ್ದಾರೆ.


