ಬೆಂಗಳೂರು: ಬೆಂಗಳೂರು ಉತ್ತರ ವಿಭಾಗದ ಸೋಲದೇವನಹಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿ ಡೋರ್ ಲಾಕ್ ಮುರಿದು, ಮನೆ ಕಳವು ಮಾಡಿದ್ದ ಇಬ್ಬರು ಕಳ್ಳರನ್ನು ಬಂಧಿಸಿದ್ದಾರೆ.
ಬಂಧಿತರಿಂದ 10.3 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣ ಮತ್ತು ಬೆಳ್ಳಿಯ ವಸ್ತುಗಳ ವಶ ಪಡಿಸಿಕೊಂಡಿದ್ದಾರೆ.
ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹೆಸರಘಟ್ಟ, ದಾಸೇನಹಳ್ಳಿ ಕ್ರಾಸ್ ನಿವಾಸಿಯೊಬ್ಬರು ತಾವು ಜುಲೈ 16, 17 ರಂದು ಮನೆಯಲ್ಲಿ ಇಲ್ಲದಾಗ ಡೋರ್ ಲಾಕ್ ಬೀಗ ಮುರಿದು ಕಳ್ಳರು ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿರುವ ಬಗ್ಗೆ ದೂರು ದಾಖಲು ಮಾಡಿರುತ್ತಾರೆ. ದೂರಿನ ಮೇರೆಗೆ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಕನ್ನ ಕಳವು ಪ್ರಕರಣ ದಾಖಲಾಗಿರುತ್ತದೆ.
ಈ ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು, ಅವರುಗಳು ನೀಡಿದ ಮಾಹಿತಿ ಮೇರೆಗೆ ಸುಮಾರು 1.3 ಲಕ್ಷ ರೂ. ಬೆಲೆ ಬಾಳುವ 1245 ಗ್ರಾಂ 3,192 ಕೆ.ಜಿ. ಚಿನ್ನಾಭರಣ, 2,020 ರೂ.ಬೆಲೆ ಬಾಳುವ ಬೆಳ್ಳಿ ವಸ್ತುಗಳು, ನಗದು ಹಣ /- ರೂ ಹಾಗೂ ಕೃತ್ಯಕ್ಕೆ ಬಳಸಿದ್ದ ಆಕ್ಟಿವಾ ಬೈಕ್, ಒಂದು ಕಬ್ಬಿಣದ ರಾಡ್, ಒಂದು ಸ್ಪೂ ಡ್ರೈವರ್‌ನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.


