ಬೆಂಗಳೂರು: ಯಲಹಂಕ ತಾಲೂಕಿನ, ಜಾಲ ಹೋಬಳಿ, ಕಟ್ಟಿಗೇನಹಳ್ಳಿ ಗ್ರಾಮದ ಸರ್ವೆ ನಂ. 28 ರಲ್ಲಿ ಖಾಸಗಿಯವರಿಂದ ಒತ್ತುವರಿಯಾಗಿದ್ದ ಸುಮಾರು 70 ಕೋಟಿ ರೂ. ಮೌಲ್ಯದ 6. 05 ಎಕರೆ ಸರ್ಕಾರಿ ಜಮೀನನ್ನು ಸೋಮವಾರ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಕಳೆದ ಮೂರು ವಾರದಲ್ಲಿ ಕಂದಾಯ ಇಲಾಖೆ ನಡೆಸುತ್ತಿರುವ ನಾಲ್ಕನೇ ಒತ್ತುವರಿ ಕಾರ್ಯಾಚರಣೆ ಇದಾಗಿದೆ. ಈ ಮೂಲಕ ಭೂ ಒತ್ತುವರಿದಾರರು ಹಾಗೂ ಭೂ ಮಾಫಿಯಾಗೆ ಸರ್ಕಾರ ಬಿಸಿ ಮುಟ್ಟಿಸಿದೆ.


