ಬಿಸಿಯೂಟ ನೌಕರರಿಂದ ಇಂದು ಬೆಂಗಳೂರು ಚಲೋ ನಡೆಯಲಿದೆ. ಫ್ರೀಡಮ್ ಪಾರ್ಕ್ ನಲ್ಲಿ ಅನಿರ್ಧಿಷ್ಟ ಧರಣಿ ಆರಂಭಿಸಲಾಗುತ್ತದೆ ಎಂದು ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ಜಿಲ್ಲಾ ಅಧ್ಯಕ್ಷ ಪ್ರಭುದೇವ್ ಯಳಸಂಗಿ ಹೇಳಿದ್ದಾರೆ.
ಅನಿರ್ಧಿಷ್ಟ ಧರಣಿಯಲ್ಲಿ ಜಿಲ್ಲೆಯಿಂದ ಸುಮಾರು 150 ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಬಿಸಿಯೂಟ ತಯಾರಕರು ಪಾಲ್ಗೊಳ್ಳುವರು ಎಂದರು


