ಬಿರಿಯಾನಿ ಹೋಟೆಲ್ ಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ ನಡೆದಿದೆ.
ಹೊಸಕೋಟೆ ಬಳಿಯ ಹಲವು ಬಿರಿಯಾನಿ ಹೋಟೆಲ್ ಗಳ ಮೇಲೆ 50ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ಏಕಕಾಲದಲ್ಲಿ ದಾಳಿ ನಡೆಸಿದೆ. ಹೋಟೆಲ್ ಮಾಲಿಕರ ವಿರುದ್ಧ ಜಿಎಸ್ ಟಿ ವಂಚನೆ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.


