ಯುಪಿಯ ಲಕ್ನೋದಲ್ಲಿ ನಡೆದ ದೌರ್ಜನ್ಯ ಬೆಳಕಿಗೆ ಬಂದಿದೆ. 8ನೇ ತರಗತಿ ಓದುತ್ತಿರುವ 12 ವರ್ಷದ ಬಾಲಕಿಯ ಮೇಲೆ ಆಟೋ ಚಾಲಕನೊಬ್ಬ ಅತ್ಯಾಚಾರ ಎಸಗಿದ್ದಾನೆ. ಏಳು ದಿನಗಳ ಕಾಲ ಆಕೆಯ ಮೇಲೆ ಅತ್ಯಾಚಾರ ನಡೆಸಿದ ನಂತರ, ಹುಡುಗಿ ಅನಾರೋಗ್ಯಕ್ಕೆ ಒಳಗಾದಳು.
ಬಾಲಕಿಯನ್ನು ಆಕೆಯ ತಾಯಿ ವೈದ್ಯರ ಬಳಿ ಕರೆದುಕೊಂಡು ಹೋದಾಗ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ. ಬಾಲಕಿಯ ತಾಯಿ ಇತ್ತೀಚೆಗೆ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.


