ಕರ್ನಾಟಕ ಸುವರ್ಣ ಮಹೋತ್ಸವ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ನಾಡದೇವಿ ಭುವನೇಶ್ವರಿ ಪ್ರತಿಮೆಯನ್ನು ಕನ್ನಡ ಭವನದ ಆವರಣದ ಬದಲು ವಿಧಾನಸೌಧ ಎದುರು ಸ್ಥಾಪಿಸಲು ಸರ್ಕಾರ ಆಲೋಚಿಸಿದೆ.
ಪ್ರತಿಮೆ ನಿರ್ಮಾಣ ಕುರಿತು ಸರ್ಕಾರ ಘೋಷಣೆ ಮಾಡಿದ್ದ ಸಂದರ್ಭದಲ್ಲಿ ಕನ್ನಡ ಭವನದ ಆವರಣದಲ್ಲಿ ಸುಮಾರು 25 ಅಡಿ ಎತ್ತರದ ಪ್ರತಿಮೆ ಸ್ಥಾಪಿಸಲು ನಿರ್ಧರಿಸಲಾಗಿತ್ತು. ಆದರೆ ಪ್ರತಿಮೆಯನ್ನು ವಿಧಾನಸೌಧದ ಸಮೀಪ ಸ್ಥಾಪಿಸಲು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದು, ಸ್ಥಳ ಪರಿಶೀಲಿಸಲಾಗುತ್ತಿದೆ.


