ಬೆಂಗಳೂರು: ಪ್ರೇಯಸಿಯ ಖಾಸಗಿ ಫೋಟೊಗಳನ್ನು ಅಪ್‌ಲೋಡ್ ಮಾಡಲು ‘ಆ್ಯಪ್’ ಸೃಷ್ಟಿಸಿದ್ದ ಆರೋಪಿಯನ್ನು ಆಗ್ನೇಯ ವಿಭಾಗದ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ಸಂಜಯ್ ಕುಮಾರ್(26) ಬಂಧಿತ ಆರೋಪಿ. ಆರೋಪಿಯಿಂದ ಪೆನ್ ಡ್ರೈವ್, ಲ್ಯಾಪ್ ಟಾಪ್, ಎರಡು ಮೊಬೈಲ್ ಜಪ್ತಿ ಮಾಡಿಕೊಳ್ಳಲಾಗಿದೆ.
ಆರೋಪಿ ಜತೆಗೆ ಕೃತ್ಯದಲ್ಲಿ ಇನ್ನೂ 12 ಮಂದಿ ಭಾಗಿಯಾಗಿರುವ ಶಂಕೆಯಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ಆರೋಪಿ ಹಾಗೂ ತಮಿಳುನಾಡಿನ ಯುವತಿ ಸಹಜೀವನ ನಡೆಸುತ್ತಿದ್ದರು ಎನ್ನಲಾಗಿದೆ.


