ಎಸ್ಸೆಸ್ಸೆಲ್ಸಿ ಅಂಕಪಟ್ಟಿಯಲ್ಲಿ ಅಭ್ಯರ್ಥಿ ಹೆಸರು, ತಂದೆ-ತಾಯಿ ಹೆಸರು, ಜನ್ಮ ದಿನಾಂಕ ಮತ್ತು ಇತರ ತಪ್ಪುಗಳಿದ್ದರೆ ಇನ್ಮುಂದೆ ಆನ್‌ಲೈನ್‌ನಲ್ಲಿಯೆ ತಿದ್ದುಪಡಿ ಮಾಡಿಕೊಳ್ಳಬಹುದು.
ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು, ತಿದ್ದುಪಡಿಗಾಗಿ ವ್ಯಾಸಂಗ ಮಾಡಿದ ಶಾಲೆಗಳ ಮುಖ್ಯ ಶಿಕ್ಷಕರಿಗೆ ದಾಖಲೆಗಳನ್ನು ಸಲ್ಲಿಸಬೇಕು.
ಮುಂದಿನ ಒಂದು ತಿಂಗಳ ಮಟ್ಟಿಗೆ ಮಾತ್ರ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ. ಬಳಿಕ ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು ಎಂದು ಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ.


